ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಲಂಚಕೋರರ ವಿರುದ್ಧ ಕ್ರಮಕ್ಕೆ ಆಗ್ರಹ

Last Updated 5 ನವೆಂಬರ್ 2021, 3:49 IST
ಅಕ್ಷರ ಗಾತ್ರ

ಚನ್ನಪಟ್ಟಣ: ವಿರುಪಾಕ್ಷಿಪುರ ನಾಡ ಕಚೇರಿಯಲ್ಲಿ ಉಪ ತಹಶೀಲ್ದಾರ್ ಹಾಗೂ ಕೆಲವು ನೌಕರ ವರ್ಗ ರೈತರ ಕೆಲಸ ಕಾರ್ಯಗಳಿಗೆ ಲಂಚ ಪಡೆಯುತ್ತಿದ್ದು, ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು ಎಂದು ರೈತ ಸಂಘದ ಪದಾಧಿಕಾರಿಗಳು ಗುರುವಾರ ತಹಶೀಲ್ದಾರ್‌ಗೆ ಮನವಿ ಪತ್ರ ನೀಡಿದರು.

ವಿರುಪಾಕ್ಷಿಪುರ ನಾಡ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಉಪ ತಹಶೀಲ್ದಾರ್ ದಿವಾಕರ್ ಹಾಗೂ ಕೆಲವು ನೌಕರರು ಸಾರ್ವಜನಿಕರಿಂದ ಲಂಚ ಪಡೆಯುತ್ತಿರುವುದರ ವಿಡಿಯೊ ನಮ್ಮ ಬಳಿ ಇದೆ. ಈ ವಿಡಿಯೊ ವೈರಲ್ ಆಗಿದೆ. ಅದರ ಬಗ್ಗೆ ಸಂಬಂಧಿಸಿದ ಅಧಿಕಾರಿಗಳ ಮೇಲೆ ಯಾವ ಕ್ರಮ ಕೈಗೊಂಡಿದ್ದೀರಿ ಎಂದು ಪ್ರಶ್ನೆ ಮಾಡಿದರು.

ಇದಕ್ಕೆ ಉತ್ತರಿಸಿದ ತಹಶೀಲ್ದಾರ್ ಕೆ.ಎನ್. ರಮೇಶ್, ಸಂಬಂಧಿಸಿದ ಅಧಿಕಾರಿಗಳ ಮೇಲೆ ದೂರು ಬಂದಿದ್ದು, ಈಗಾಗಲೇ ಆ ಅಧಿಕಾರಿಗಳಿಗೆ ನೋಟಿಸ್ ನೀಡಲಾಗಿದೆ. ಘಟನೆ ಬಗ್ಗೆ ಸಮಗ್ರ ಮಾಹಿತಿ ಪಡೆಯಲಾಗುತ್ತಿದೆ. ಈ ಪ್ರಕರಣದ ಬಗ್ಗೆ ಜಿಲ್ಲಾಧಿಕಾರಿ ಅವರ ಗಮನಕ್ಕೆ ತರಲಾಗುವುದು. ಸಮಗ್ರವಾದ ತನಿಖೆ ನಡೆದು ತಪ್ಪಿತಸ್ಥರ ಮೇಲೆ ನಿರ್ದಾಕ್ಷಿಣ್ಯ ಕ್ರಮ ತೆಗೆದುಕೊಳ್ಳಲಾಗುವುದು ಎಂದುತಿಳಿಸಿದರು.

ತಾಲ್ಲೂಕಿನ ಎಲ್ಲಾ ನಾಡ ಕಚೇರಿಗಳಲ್ಲಿಯೂ ಲಂಚ ಬೇರು ಬಿಟ್ಟಿದೆ. ಅಲ್ಲದೆ ತಾಲ್ಲೂಕು ಕಚೇರಿಯಲ್ಲಿಯೂ ರೈತರ ಯಾವುದೇ ಕೆಲಸಗಳು ಅಗುತ್ತಿಲ್ಲ. ಹಣ ಕೊಟ್ಟರೆ ಮಾತ್ರ ಕೆಲಸವಾಗುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂದು ದೂರಿದರು.

ತಾಲ್ಲೂಕು ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುವ ಅಧಿಕಾರಿಗಳು, ಸಿಬ್ಬಂದಿ ವರ್ಗಕ್ಕೆ ಅವರ ಹುದ್ದೆಯ ಗುರುತಿನ ಪತ್ರ ಇಲ್ಲದಿರುವುದರಿಂದ ಯಾವ ಅಧಿಕಾರಿಗಳೆಂದು ಗುರುತಿಸುವುದೇ ಸಮಸ್ಯೆಯಾಗಿದೆ. ಅಧಿಕಾರಿಗಳಿಂದ ಪ್ರಾರಂಭವಾಗಿ ಡಿ ಗ್ರೂಪ್ ನೌಕರರವರೆಗೂ ಗುರುತಿನ ಪತ್ರ ನೀಡುವಂತೆಒತ್ತಾಯಿಸಿದರು.

ಎಲ್ಲರಿಗೂ ಗುರುತಿನ ಪತ್ರವನ್ನು ನೀಡಲಾಗಿದೆ. ಅದನ್ನು ಹಾಕಿಕೊಂಡೇ ಕರ್ತವ್ಯ ನಿರ್ವಸುವಂತೆ ಅದೇಶ ನೀಡಲಾಗಿದೆ ಎಂದು ತಹಶೀಲ್ದಾರ್ ತಿಳಿಸಿದರು.

ರೈತ ಸಂಘದ ರಾಜ್ಯ ವಿಭಾಗೀಯ ಉಪಾಧ್ಯಕ್ಷ ಅಣ್ಣಿಗೆರೆ ಮಲ್ಲಯ್ಯ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕೆ.ಎನ್. ರಾಜು, ಜಿಲ್ಲಾ ಗೌರವಾಧ್ಯಕ್ಷ ತಿಮ್ಮೇಗೌಡ, ತಾಲ್ಲೂಕು ಅಧ್ಯಕ್ಷ ರಾಮೇಗೌಡ, ಜಿಲ್ಲಾ ಕಾರ್ಯದರ್ಶಿ ಕೃಷ್ಣಪ್ಪ, ಪದಾಧಿಕಾರಿಗಳಾದ ಗುರುಲಿಂಗಯ್ಯ, ರವಿ, ಮೋಹನ್, ಜೈಕೃಷ್ಣ, ವಿಜಯ್ ಕುಮಾರ್ ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT