ಶನಿವಾರ, 2 ಡಿಸೆಂಬರ್ 2023
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ: ಮತ ಎಣಿಕೆಯತ್ತ ಅಭ್ಯರ್ಥಿಗಳ ಚಿತ್ತ

ಇಂದು ಎಣಿಕೆ ಕಾರ್ಯ l ಸಂಭ್ರಮಾಚರಣೆಗಿಲ್ಲ ಅವಕಾಶ
Last Updated 30 ಏಪ್ರಿಲ್ 2021, 5:45 IST
ಅಕ್ಷರ ಗಾತ್ರ

ರಾಮನಗರ: ಜಿಲ್ಲೆಯ ರಾಮನಗರ ಮತ್ತು ಚನ್ನಪಟ್ಟಣ ನಗರಸಭೆ ಚುನಾವಣೆ ಮತ ಎಣಿಕೆ ಕಾರ್ಯವು ಶುಕ್ರವಾರ ನಡೆಯಲಿದ್ದು, ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ.

ರಾಮನಗರದ ಸರ್ಕಾರಿ ಪ್ರಥಮದರ್ಜೆ ಕಾಲೇಜು ಹಾಗೂ ಚನ್ನಪಟ್ಟಣದ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಬೆಳಿಗ್ಗೆ 8ಕ್ಕೆ ಏಕಕಾಲಕ್ಕೆ ಮತ ಎಣಿಕೆ ಕಾರ್ಯವು ಆರಂಭ ಆಗಲಿದೆ. ಪೊಲೀಸರ ಭದ್ರತೆಯಲ್ಲಿ ಸ್ಟ್ರಾಂಗ್‌ ರೂಮ್‌ನಲ್ಲಿ ಇರುವ ಇವಿಎಂಗಳನ್ನು ಎಣಿಕೆ ಟೇಬಲ್‌ಗಳಿಗೆ ತಂದು ಎಣಿಕೆ ಮಾಡಲಾಗುತ್ತದೆ. ಬೆಳಿಗ್ಗೆ 11ರ ಸುಮಾರಿಗೆಲ್ಲ ಫಲಿತಾಂಶ ದೊರೆಯುವ ನಿರೀಕ್ಷೆ ಇದೆ.

ರಾಮನಗರ ನಗರಸಭೆಯ 31 ವಾರ್ಡ್‌ಗಳ ಮತ ಎಣಿಕೆಯು 4 ಕೊಠಡಿಗಳಲ್ಲಿ ನಡೆಯಲಿದೆ. ಪ್ರತಿ ಕೊಠಡಿಯಲ್ಲಿ 4 ಟೇಬಲ್‌ಗಳ ವ್ಯವಸ್ಥೆ ಮಾಡಲಾಗಿದೆ. ಎಣಿಕೆ ಕಾರ್ಯಕ್ಕೆ 40 ಮಂದಿಯನ್ನು ನಿಯೋಜಿಸಲಾಗಿದೆ. ಚನ್ನಪಟ್ಟಣ ನಗರಸಭೆಯ 31 ವಾರ್ಡ್‌ಗಳ ಮತ ಎಣಿಕೆ ಕಾರ್ಯ 2 ಕೊಠಡಿಗಳ 9 ಟೇಬಲ್‌ಗಳಲ್ಲಿ ಜರುಗಲಿದೆ. ಮತ ಎಣಿಕೆಗಾಗಿ 24 ಮಂದಿಯನ್ನು ನೇಮಿಸಲಾಗಿದೆ.

ಕೋವಿಡ್ ಎರಡನೇ ಅಲೆ ಹಿನ್ನೆಲೆಯಲ್ಲಿ ಮಾರ್ಗಸೂಚಿ ಪಾಲನೆಗೆ ಒತ್ತು ನೀಡಲಾಗಿದ್ದು, ಎಣಿಕೆ ಕೇಂದ್ರಕ್ಕೆ ಬರುವ ಪ್ರತಿಯೊಬ್ಬರನ್ನು ಥರ್ಮಲ್‌ ಸ್ಕ್ಯಾನಿಂಗ್‌ಗೆ ಒಳಪಡಿಸಿದ ನಂತರವಷ್ಟೇ ಒಳಬಿಡಲಾಗುತ್ತದೆ. ಎಣಿಕೆ ಕಾರ್ಯಕ್ಕೆ ನಿಯೋಜನೆಗೊಂಡ ಸಿಬ್ಬಂದಿಯು ಬೆಳಿಗ್ಗೆ 6.30ಕ್ಕೆ ಆಯಾಯ ಮತ ಎಣಿಕೆ ಸ್ಥಳದಲ್ಲಿ ಹಾಜರಾಗುವಂತೆ ಚುನಾವಣಾಧಿಕಾರಿ
ಸೂಚಿಸಿದ್ದಾರೆ.

ಪೊಲೀಸ್ ಭದ್ರತೆ: ಮತ ಎಣಿಕೆ ಹಿನ್ನೆಲೆಯಲ್ಲಿ ಕೇಂದ್ರಗಳಿಗೆ ಕೆಎಸ್‍ಆರ್‌ಪಿ, ಡಿಎಆರ್ ತುಕಡಿಗಳನ್ನು ನಿಯೋಜಿಸಲಾಗಿದೆ. ಪಾಸ್ ಇದ್ದವರಿಗೆ ಮಾತ್ರ ಪ್ರವೇಶ ಸಿಗಲಿದೆ. ಕೇಂದ್ರದ ಒಳಗೆ ಮೊಬೈಲ್‌ ಬಳಕೆನಿಷೇಧಿಸಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT