ಗುರುವಾರ , ಜನವರಿ 23, 2020
27 °C

ಕಾರು ಕೆರೆಗೆ ಬಿದ್ದು ನಾಲ್ವರು ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ಕೆರೆಗೆ ಕಾರು ಉರುಳಿಬಿದ್ದು ಅದರೊಳಗಿದ್ದ ಎಲ್ಲ ನಾಲ್ವರು ಮೃತಪಟ್ಟ ಘಟನೆ ಬೆಂಗಳೂರು ದಕ್ಷಿಣ ತಾಲ್ಲೂಕಿನ ದೇವಮಾಚೋಹಳ್ಳಿ ಗ್ರಾಮದ ಬಳಿ ಭಾನುವಾರ ಸಂಜೆ ನಡೆದಿದೆ.

ಸುನಿಲ್, ಸಂತೋಷ್, ಮಂಜುನಾಥ್ ಹಾಗೂ ರಾಘವೇಂದ್ರ ಮೃತಪಟ್ಟವರು. ಬೆಂಗಳೂರಿನಿಂದ ಹುಲಿಯೂರು ದುರ್ಗಕ್ಕೆ ಬರುತ್ತಿರುವ ವೇಳೆ ಈ ದುರ್ಘಟನೆ ಸಂಭವಿಸಿದೆ. ವೇಗವಾಗಿ ಸಾಗುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದ ಕೆರೆಗೆ ಉರುಳಿಬಿದ್ದಿದೆ. ಒಳಗಿದ್ದವರು ಹೊರಬರಲಾಗದೇ ಮೃತಪಟ್ಟರು ಎಂದು ಪೊಲೀಸರು ತಿಳಿಸಿದರು.

ಮೃತದೇಹಗಳನ್ನು ನೆಲಮಂಗಲ ಹಾಗೂ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನಿಸಲಾಗಿದೆ. ತಾವರೆಕೆರೆ ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದರು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು