ಗುರುವಾರ , ಫೆಬ್ರವರಿ 2, 2023
26 °C

ಯೋಗೇಶ್ವರ್ ಕಾರಿನ ಮೇಲೆ ಕಲ್ಲು: ಜೆಡಿಎಸ್ ಕಾರ್ಯಕರ್ತರ ವಿರುದ್ಧ ಪ್ರಕರಣ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರಾಮನಗರ: ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಕಾರಿನ ಮೇಲೆ ಕಲ್ಲು, ಮೊಟ್ಟೆ ತೂರಿದ ಜೆಡಿಎಸ್ ಕಾರ್ಯಕರ್ತರ ವಿರುದ್ಧ ಚನ್ನಪಟ್ಟಣ ಗ್ರಾಮೀಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಾರ್ ಚಾಲಕ ವೆಂಕಟೇಶ ದೂರು ಆಧರಿಸಿ ಐಪಿಸಿ ಸೆಕ್ಷನ್ 353 ಹಾಗೂ 427 ಅಡಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ‌. 

ಚನ್ನಪಟ್ಟಣದ ಬೈರಾಪಟ್ಟಣ ಸಮೀಪ ಕಾಮಗಾರಿಗೆ ಚಾಲನೆ ನೀಡಿ ವಾಪಸ್ ಆಗುತ್ತಿದ್ದ ವೇಳೆ ಜೆಡಿಎಸ್ ಕಾರ್ಯಕರ್ತರು ಯೋಗೇಶ್ವರ್ ಪ್ರಯಾಣಿಸುತ್ತಿದ್ದ ಕಾರಿಗೆ ಮುತ್ತಿಗೆ ಹಾಕಿ, ಕಲ್ಲು ಹಾಗೂ ಮೊಟ್ಟೆ ತೂರಿದ್ದರು. 

ನಿಖಿಲ್ ಭೇಟಿ: ಕಾರ್ಯಕರ್ತರ ಮೇಲೆ ಪ್ರಕರಣ ದಾಖಲಾದ ಬೆನ್ನಲ್ಲೇ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾನುವಾರ ರಾಮನಗರಕ್ಕೆ ಭೇಟಿ ನೀಡಿ ಡಿವೈಎಸ್ಪಿ ಓಂಪ್ರಕಾಶ್ ಜೊತೆ ಚರ್ಚಿಸಿದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು