ಕನಕಪುರ: ಚಾಮುಂಡೇಶ್ವರಿ ವರ್ಧಂತಿಯು ಸೋಮವಾರ ವಿಜೃಂಭಣೆಯಿಂದ ನಡೆಯಿತು.
ದೇವಾಲಯವನ್ನು ಫಲ–ಪುಷ್ಪಗಳಿಂದ ವಿಶೇಷವಾಗಿ ಅಲಂಕಾರ ಮಾಡಲಾಗಿತ್ತು. ದೇವಾಲಯದಲ್ಲಿ ಬೆಳಿಗ್ಗೆಯಿಂದಲೇ ಹೋಮ–ಹವನ ಪೂಜೆ ನಡೆಯಿತು.
ಛತ್ರಗ್ರಾಮ, ರೈಸ್ ಮಿಲ್, ಬೂದುಗುಪ್ಪೆ, ಆಡನಹಕುಪ್ಪೆ, ಕಲ್ಲಳ್ಳಿ, ತುಂಗಣೆ, ಕನಕಪುರ ನಗರ ಸೇರಿದಂತೆ ತಾಲ್ಲೂಕಿನ ವಿವಿಧ ಗ್ರಾಮಗಳಿಂದ ನೂರಾರು ಭಕ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡು ಪೂಜೆ ನೆರವೇರಿಸಿದರು.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.