ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಾಮನಗರ, ತುಮಕೂರಿನ ಬಿಜೆಪಿ ಜಿಲ್ಲಾ ಅಧ್ಯಕ್ಷರ ಬದಲಾವಣೆ

Last Updated 22 ಜೂನ್ 2020, 11:27 IST
ಅಕ್ಷರ ಗಾತ್ರ

ಬೆಂಗಳೂರು: ರಾಮನಗರ ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಹುಲುವಾಡಿ ದೇವರಾಜ್‌ ಮತ್ತು ತುಮಕೂರು ಜಿಲ್ಲಾ ಬಿಜೆಪಿ ಅಧ್ಯಕ್ಷರನ್ನಾಗಿ ಬಿ. ಸುರೇಶ್‌ಗೌಡ ಅವರನ್ನು ನೇಮಿಸಲಾಗಿದೆ.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್ ಕಟೀಲ್‌ ಅವರು ಈ ಸಂಬಂಧ ಸೋಮವಾರ ಆದೇಶ ಹೊರಡಿಸಿದ್ದಾರೆ.

ರಾಮನಗರ ಜಿಲ್ಲೆಯ ಅಧ್ಯಕ್ಷರಾಗಿ ಈವರೆಗೆ ಕಾರ್ಯ ನಿರ್ವಹಿಸುತ್ತಿದ್ದ ರುದ್ರೇಶ್ ಅವರು ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಅವರ ಆಪ್ತರು. ಆದರೆ, ಎಲ್ಲ ಜಿಲ್ಲೆಗಳಲ್ಲೂ ಅಧ್ಯಕ್ಷರು ಮತ್ತು ಪದಾಧಿಕಾರಿಗಳನ್ನು ಬದಲಿಸುವ ಹಿನ್ನೆಲೆಯಲ್ಲಿ ಈ ಎರಡೂ ಜಿಲ್ಲೆಗಳಲ್ಲಿ ಬದಲಾವಣೆ ಮಾಡಲಾಗಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT