ಮಂಗಳವಾರ, 21 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

‘ಭಾರತದ ಕಡೆಗೆ ವಿಶ್ವದ ವಿಶ್ವಾಸ’

Published 1 ಮೇ 2024, 5:52 IST
Last Updated 1 ಮೇ 2024, 5:52 IST
ಅಕ್ಷರ ಗಾತ್ರ

ಚನ್ನಪಟ್ಟಣ: ಭಾರತ ವಿಶ್ವದ ಮೂರನೇ ಶಕ್ತಿಯಾಗಿ ಬೆಳೆಯುತ್ತಿದ್ದು, ದೇಶದ ಕಡೆಗೆ ವಿಶ್ವದ ವಿಶ್ವಾಸ ಸಾಕಷ್ಟು ಬೆಳೆದಿದೆ ಎಂದು ವಿಷನ್ ಡಿಜಿಟಲ್ ಇಂಡಿಯಾದ ಅಧ್ಯಕ್ಷ ಹರಿಕೃಷ್ಣ ಮಾರಂ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವತಿಯಿಂದ ಶತಮಾನೋತ್ಸವ ಭವನದಲ್ಲಿ ಸೋಮವಾರ ಏರ್ಪಡಿಸಿದ್ದ ಅಂತರರಾಷ್ಟ್ರೀಯ ಸಮ್ಮೇಳನ ಕಾರ್ಯಕ್ರಮದಲ್ಲಿ ಸುಸ್ಥಿರ ಕಡೆಗೆ ಶಿಕ್ಷಣದ ಪಾತ್ರ ವಿಷಯ ಕುರಿತು ಉಪನ್ಯಾಸ ನೀಡಿದರು.

ವಿಶ್ಚದ ದೊಡ್ಡ ಸಾಫ್ಟ್ ವೇರ್ ಕಂಪನಿಗಳು ಬೆಂಗಳೂರಿನಲ್ಲಿ ಮುಖ್ಯ ಕಚೇರಿ, ಬ್ರಾಂಚ್ ಹೊಂದಿವೆ. ಪ್ರಪಂಚದ ವಿವಿಧ ದೇಶಗಳು ಭಾರತದಲ್ಲಿ ಬಂಡವಾಳ ಹೂಡಿಕೆ ಸುರಕ್ಷಿತ ಎಂದು ಭಾವಿಸಿವೆ ಎಂದರು.

ದೇಶದ ಔಷಧ ನೂರಕ್ಕೂ ಹೆಚ್ಚು ದೇಶಗಳಿಗೆ ರಫ್ತಾಗುತ್ತಿದೆ. ಮುಂದಿನ ದಿನಗಳಲ್ಲಿ ಶಿಕ್ಷಣ ಕ್ಷೇತ್ರದಲ್ಲಿ ಇನ್ನಷ್ಟು ಬದಲಾವಣೆ ಆಗಲಿದೆ. ಡಿಜಿಟಲ್ ವಿಶ್ವವಿದ್ಯಾಲಯಗಳು ಬರುವ ಸಾಧ್ಯತೆ ಇದೆ. ಶಿಕ್ಷಣ ಕ್ಷೇತ್ರದಲ್ಲಿ ನೂರಕ್ಕೆ ನೂರು ಪ್ರಗತಿ ಸಾಧಿಸುವುದು ದೊಡ್ಡ ಸವಾಲಾಗಿದೆ. ಶಿಕ್ಷಣದೊಂದಿಗೆ ಕೌಶಲಕ್ಕೂ ಒತ್ತು ನೀಡಬೇಕಿದೆ ಎಂದರು.

ಕಾರ್ಯಕ್ರಮ ಉದ್ಘಾಟಿಸಿದ ಬೆಂಗಳೂರು ವಿಶ್ವವಿದ್ಯಾಲಯದ ಕುಲಪತಿ ಡಾ.ಎಸ್.ಎಂ.ಜಯಕರ ಮಾತನಾಡಿ, ಯುವಶಕ್ತಿ ದೇಶದ ದೊಡ್ಡಶಕ್ತಿ. ಯುವ ಸಮೂಹ ಮೊದಲು ಶೈಕ್ಷಣಿಕವಾಗಿ ಪ್ರಗತಿ ಕಾಣಬೇಕು. ಯುವ ಸಮೂಹ ದೇಶದ ಪ್ರಗತಿಗೆ ಕೊಡುಗೆ ನೀಡಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಂಶುಪಾಲ ಡಾ.ವೆಂಕಟೇಶ್ ಅಧ್ಯಕ್ಷತೆ ವಹಿಸಿದ್ದರು. ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಕಾರ್ಯನಿರ್ವಾಹಕ ಅಧಿಕಾರಿ ಟಿ.ಆರ್.ಶೊಭಾ, ನಿರ್ದೇಶಕರಾದ ಡಾ.ಪ್ರೀತಿ, ಕೃಷ್ಣಸ್ವಾಮಿ, ಪ್ರೊ.ಕಮಲ್ ಉದ್ದೀನ್, ಡಾ.ಖಾನ್, ಕಾಲೇಜಿನ ಸಹ ಪ್ರಾಧ್ಯಾಪಕರು, ಹಿರಿಯ ವಿದ್ಯಾರ್ಥಿಗಳು, ವಿದ್ಯಾರ್ಥಿಗಳು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT