‘ನಿಖಿಲ್ ಕುಮಾರಸ್ವಾಮಿ ಚನ್ನಪಟ್ಟಣ ಬಿಟ್ಟು ಎಲ್ಲೂ ಹೋಗಲ್ಲ. ಅವರು ರಾಜ್ಯದಲ್ಲಿ ಮುಂದೆ ಪಕ್ಷದ ಜವಾಬ್ದಾರಿ ಹೊರಬೇಕಿದೆ. ಅವರ ನೇತೃತ್ವದಲ್ಲಿ ಪಕ್ಷದ ನಾಯಕರು ಇನ್ನೂ ಸಬಲವಾಗಿ ಜೆಡಿಎಸ್ ಪಕ್ಷವನ್ನು ಸಂಘಟಿಸಬೇಕಿದೆ’ ಎಂದು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ ಶನಿವಾರ ನಡೆದ ಮತದಾರರ ಕೃತಜ್ಞತಾ ಸಭೆಯಲ್ಲಿ ಮಾತನಾಡಿದ ಅವರು, ‘ನಾನು ಕೇಂದ್ರ ಸಚಿವನಾಗಿದ್ದೇನೆ. ಅಲ್ಲದೆ ಅನಾರೋಗ್ಯ ಇರುವುದರಿಂದ ನಿಖಿಲ್ ರಾಜ್ಯದಲ್ಲಿ ಪಕ್ಷದ ಜವಾಬ್ದಾರಿ ಹೊರಬೇಕಾಗುತ್ತದೆ’ ಎಂದು ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.