ರಾಮನಗರ: ಚನ್ನಪಟ್ಟಣ ತಾಲ್ಲೂಕಿನ ರಾಂಪುರ ಗ್ರಾಮದಲ್ಲಿ ಶನಿವಾರ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಭೂಮಿಪೂಜೆ ಕಾರ್ಯಕ್ರಮಕ್ಕೆ ಅಡ್ಡಿಪಡಿಸಿದ ಜೆಡಿಎಸ್ ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ಚನ್ನಪಟ್ಟಣ ಕ್ಷೇತ್ರಕ್ಕೆಂದು ಮುಖ್ಯಮಂತ್ರಿಗಳು 50 ಕೋಟಿ ವಿಶೇಷ ಅನುದಾನ ನೀಡಿದ್ದಾರೆ. ಈ ಅನುದಾನದ ಅಡಿ ವಿವಿಧ ಕಾಮಗಾರಿಗೆ ಜಿಲ್ಲಾ ಉಸ್ತುವಾರಿ ಸಚಿವ ಸಿ.ಎನ್. ಅಶ್ವತ್ಥನಾರಾಯಣ ಹಾಗೂ ವಿಧಾನ ಪರಿಷತ್ ಸದಸ್ಯ ಸಿ.ಪಿ. ಯೋಗೇಶ್ವರ್ ಚಾಲನೆ ನೀಡುತ್ತಿದ್ದಾರೆ.

ಈ ಕಾರ್ಯಕ್ರಮಕ್ಕೆ ಸ್ಥಳೀಯ ಶಾಸಕ ಎಚ್.ಡಿ. ಕುಮಾರಸ್ವಾಮಿ ಅವರನ್ನು ಆಹ್ವಾನಿಸಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಜೆಡಿಎಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಯೋಗೇಶ್ವರ್ ಶೇ 40 ಕಮಿಷನ್ ಗಾಗಿಯೇ ಈ ಕಾಮಗಾರಿಗಳಿಗೆ ಚಾಲನೆ ಕೊಡಿಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ದೂರಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.