ಬೆಂಗಳೂರು: ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಟಿಕೆಟ್ ಕೈತಪ್ಪಿದ್ದರಿಂದ ಆಸಮಧಾನಗೊಂಡಿದ್ದ ಬೆಂಗಳೂರು - ಮೈಸೂರು ಇನ್ಫ್ರಾಸ್ಟ್ರಕ್ಟರ್ ಕಾರಿಡಾರ್ ಪ್ಲಾನಿಂಗ್ ಅಥಾರಿಟಿ ಅಧ್ಯಕ್ಷ ರಘುನಂದನ್ ರಾಮಣ್ಣ ಮತ್ತು ಕಾಂಗ್ರೆಸ್ ಅಭ್ಯರ್ಥಿ ಸಿ. ಪಿ. ಯೋಗೇಶ್ವರ್ ನಡುವೆ ಸಂಧಾನ ನಡೆಸುವಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಮತ್ತು ಮಾಜಿ ಸಂಸದ ಡಿ. ಕೆ. ಸುರೇಶ್ ಯಶಸ್ವಿಯಾಗಿದ್ದಾರೆ.

ಶಿವಕುಮಾರ್ ಅವರು ಈ ಇಬ್ಬರು ನಾಯಕರನ್ನೂ ಸದಾಶಿವನಗರದ ತಮ್ಮ ನಿವಾಸಕ್ಕೆ ಮಂಗಳವಾರ ಬೆಳಿಗ್ಗೆ ಕರೆಸಿ ಮಾತುಕತೆ ನಡೆಸಿದರು. ಡಿ.ಕೆ. ಸುರೇಶ್ ಕೂಡಾ ಇದ್ದರು. ನಂತರ ಇಬ್ಬರು ನಾಯಕರೂ ಪರಸ್ಪರ ಹಸ್ತಲಾಘವ ಮಾಡಿದರು.

ಯೋಗೇಶ್ವರ್ ಅವರ ಪರ ಪ್ರಚಾರ ನಡೆಸಿ, ಅವರ ಗೆಲುವಿಗೆ ಶ್ರಮಿಸುವುದಾಗಿ ರಘುನಂದನ್ ರಾಮಣ್ಣ ಅವರು ಇದೇ ಸಂದರ್ಭದಲ್ಲಿ ಹೇಳಿದರು.

ಕಳೆದ ಲೋಕಸಭಾ ಚುನಾವಣೆ ವೇಳೆ ಚನ್ನಪಟ್ಟಣ ವಿಧಾನಸಭೆ ಕ್ಷೇತ್ರದ ಚುನಾವಣೆ ಉಸ್ತುವಾರಿ ವಹಿಸಿಕೊಂಡಿದ್ದ ರಘುನಂದನ್ ರಾಮಣ್ಣ ಅವರು ತಳಮಟ್ಟದಿಂದ ಪಕ್ಷ ಸಂಘಟನೆ ಮಾಡಿದ್ದರು. ಚನ್ನಪಟ್ಟಣ ನಗರಸಭೆಯ 14 ಮಂದಿ ಜೆಡಿಎಸ್ ಸದಸ್ಯರು ಹಾಗೂ ಇಬ್ಬರು ಬಿಜೆಪಿ ಸದಸ್ಯರನ್ನು ಕಾಂಗ್ರೆಸ್ ಗೆ ಕರೆತರುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರು. ಅಲ್ಲದೆ ತಾಲ್ಲೂಕಿನಾದ್ಯಂತ ನೂರಾರು ಬಿಜೆಪಿ ಮತ್ತು ಜೆಡಿಎಸ್ ನಾಯಕರು, ಕಾರ್ಯಕರ್ತರನ್ನು ಕಾಂಗ್ರೆಸ್ ಪಕ್ಷಕ್ಕೆ ಕರೆತರುವಲ್ಲಿ ಯಶಸ್ವಿಯಾಗಿದ್ದರು.

ಕಳೆದ ವಿಧಾನಸಭಾ ಚುನಾವಣೆಯಲ್ಲಿ 15 ಸಾವಿರವಿದ್ದ ಕಾಂಗ್ರೆಸ್ ಮತ ಗಳಿಕೆ ಪ್ರಮಾಣ ಲೋಕಸಭೆ ಚುನಾವಣೆ ವೇಳೆಗೆ 87 ಸಾವಿರಕ್ಕೆ ಏರಿಕೆಯಾಗಿತ್ತು. ಕ್ಷೇತ್ರಕ್ಕೆ ಸರ್ಕಾರದ ನಾನಾ ಅಭಿವೃದ್ಧಿ ಕಾರ್ಯಕ್ರಮಗಳು ಬರುವಲ್ಲಿಯೂ ರಘುನಂದನ್ ರಾಮಣ್ಣ ಅವರು ಪ್ರಮುಖ ಪಾತ್ರ ವಹಿಸಿದ್ದರು.

ಈಗ ಯೋಗೇಶ್ವರ್ ಪರ ಚುನಾವಣೆ ಪ್ರಚಾರ ನಡೆಸಲಿದ್ದಾರೆ.
.ಚನ್ನಪಟ್ಟಣ ಉಪ ಚುನಾವಣೆ: ಹಳ್ಳಿಗಳಲ್ಲಿ ಅಪ್ಪ–ಮಗನ ಮತಬೇಟೆ.ಚನ್ನಪಟ್ಟಣ ಉಪ ಚುನಾವಣೆ: 38 ನಾಮಪತ್ರಗಳು ಕ್ರಮಬದ್ಧ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.