ಚನ್ನಪಟ್ಟಣ: ನಗರದಲ್ಲಿ ಹಲವು ಸಮಸ್ಯೆಗಳು ತಾಂಡವಾಡುತ್ತಿವೆ. ಆದರೆ, ಅವುಗಳ ಪರಿಹಾರಕ್ಕೆ ನಗರಸಭೆ ಅಧಿಕಾರಿಗಳು ಸ್ಪಂದಿಸುತ್ತಿಲ್ಲ. ಇದರಿಂದ ಮತ ನೀಡಿದ ಜನರಿಗೆ ಉತ್ತರ ಹೇಳುವುದು ಕಷ್ಟವಾಗುತ್ತಿದೆ ಎಂದು ಆಡಳಿತ ಪಕ್ಷದ ಸದಸ್ಯರು ಸೇರಿದಂತೆ ನಗರಸಭೆ ಸದಸ್ಯರು ಪಕ್ಷಾತೀತವಾಗಿ ತೀವ್ರ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗ ನಗರಸಭೆ ಸಾಮಾನ್ಯ ಸಭೆಯಲ್ಲಿ ನಡೆಯಿತು.

ನಗರಸಭೆ ಅಧ್ಯಕ್ಷ ವಾಸಿಲ್ ಆಲಿಖಾನ್ ಅಧ್ಯಕ್ಷತೆಯಲ್ಲಿ ಸೋಮವಾರ ನಗರಸಭೆ ಸಭಾಂಗಣದಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಮೊದಲಿಗೆ ಅಧ್ಯಕ್ಷರು, ಸದಸ್ಯರಿಗೆ ತಮ್ಮ ವಾರ್ಡ್ ವ್ಯಾಪ್ತಿಯ ಸಮಸ್ಯೆಗಳನ್ನು ಸಭೆಗೆ ತಿಳಿಸಲು ಅವಕಾಶ ಕಲ್ಪಿಸಿದರು. ಈ ವೇಳೆ ಎಲ್ಲ ಸದಸ್ಯರು ಸ್ವಚ್ಛತೆ ಸೇರಿದಂತೆ ವಿವಿಧ ಸಮಸ್ಯೆಗಳ ಬಗ್ಗೆ ಸಭೆಯ ಗಮನಕ್ಕೆ ತಂದರು.

ಅಧಿಕಾರಿಗಳು ಮಾತು ಕೇಳುವುದಿಲ್ಲ. ಮತ ನೀಡಿರುವ ಜನರಿಗೆ ಉತ್ತರಿಸುವುದು ಹೇಗೆ ಎಂದು ಸದಸ್ಯರು ಆಕ್ರೋಶ ವ್ಯಕ್ತಪಡಿಸಿದರು.

ನಂತರ ನಗರದಲ್ಲಿ ನಿರ್ಮಾಣವಾಗಬೇಕಾಗಿರುವ ಅಂಗನವಾಡಿ ಕಟ್ಟಡ ಕಾಮಗಾರಿ ಹಾಗೂ ಅವುಗಳ ನಿವೇಶನಗಳ ಬಗ್ಗೆ ಚರ್ಚೆ ನಡೆಯಿತು. ಈ ವೇಳೆ 15ನೇ ವಾರ್ಡ್ ಸದಸ್ಯೆ ಸುಮಾ ರವೀಶ್, ತಮ್ಮ ವಾರ್ಡ್ನ ಅಂಗನವಾಡಿ ಅಭಿವೃದ್ಧಿ ಬಗ್ಗೆ ಎಷ್ಟು ಬಾರಿ ಮನವಿ ಮಾಡಿದರೂ ಪ್ರಯೋಜನವಾಗಿಲ್ಲ. ಆದರೆ, ಪಕ್ಕದ 14ನೇ ವಾರ್ಡ್ನಲ್ಲಿ ಕಟ್ಟಡಕ್ಕೆ ಅನುಮೋದನೆ ದೊರಕಿದೆ. ಮನವಿಗೆ ಪುರಸ್ಕಾರ ಸಿಕ್ಕಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಎರಡು ವಾರ್ಡ್ಗಳು ಎಲೆಕೇರಿಗೆ ಸೇರುತ್ತವೆ. ಆದರೆ, ಒಂದು ಕಡೆ ಅನುಮೋದನೆ ನೀಡಿ, ಇನ್ನೊಂದು ಕಡೆ ನಿರ್ಲಕ್ಷ್ಯ ಮಾಡಲಾಗಿದೆ. ಅಲ್ಲಿ ಕಾಮಗಾರಿ ನಡೆಯಬೇಕಾದರೆ ವಾರ್ಡ್ನಲ್ಲಿಯೂ ಅಂಗನವಾಡಿ ಕಾಮಗಾರಿ ನಡೆಯಬೇಕು ಎಂದು ಆಗ್ರಹಿಸಿದರು. ಈ ವೇಳೆ 14ನೇ ವಾರ್ಡ್ ಸದಸ್ಯ ಶ್ರೀನಿವಾಸಮೂರ್ತಿ ಎದ್ದು ನಿಂತು ಮಾತನಾಡುತ್ತಿದ್ದಂತೆ ಇಬ್ಬರ ನಡುವೆ ಬಿರುಸಿನ ಚರ್ಚೆ ನಡೆಯಿತು. ನಂತರ ಅಧ್ಯಕ್ಷ, ಇಬ್ಬರನ್ನೂ ಸಮಾಧಾನಪಡಿಸಿ ಸಮಸ್ಯೆ ಬಗೆಹರಿಸುವ ಭರವಸೆ ನೀಡಿದರು.

ನಂತರ ಕೆಲ ಸದಸ್ಯರು ತಮ್ಮ ವಾರ್ಡ್ನಲ್ಲಿ ಸ್ವಚ್ಛತೆಗಾಗಿ ಜೆಸಿಬಿ ವಾಹನಕ್ಕೆ ಮನವಿ ಮಾಡಿದರೆ ಅಧಿಕಾರಿಗಳು ಕೊಡುತ್ತಿಲ್ಲ. ಆದರೆ, ಪ್ರತಿ ತಿಂಗಳು ಆ ವಾಹನಗಳ ಡಿಸೇಲ್ಗಾಗಿ ಮೂರುವರೆ ಲಕ್ಷ ವೆಚ್ಚ ಮಾಡಲಾಗುತ್ತಿದೆ. ಯಾವ ವಾಹನ ಎಲ್ಲಿ ಕೆಲಸ ಮಾಡುತ್ತಿದೆ ಎಂಬುದೇ ಸದಸ್ಯರಿಗೆ ತಿಳಿಯುತ್ತಿಲ್ಲ. ಆರೋಗ್ಯ ನಿರೀಕ್ಷಕರು ಈ ಬಗ್ಗೆ ಸೂಕ್ತ ಮಾಹಿತಿ ನೀಡಬೇಕು ಎಂದು ಆಗ್ರಹಿಸಿದರು.

ಅಧ್ಯಕ್ಷ ವಾಸಿಲ್ ಆಲಿಖಾನ್ ಆರೋಗ್ಯ ಶಾಖೆ ವಿರುದ್ಧ ಸಿಡಿಮಿಡಿಗೊಂಡರು. ಈ ಬಗ್ಗೆ ಸೂಕ್ತ ಮಾಹಿತಿ ನೀಡದವರ ವಿರುದ್ಧ ಕ್ರಮ ಜರುಗಿಸಲಾಗುವುದು ಅಧ್ಯಕ್ಷರು ಎಚ್ಚರಿಕೆ ನೀಡಿದರು.

ನಗರದಲ್ಲಿ ನಡೆಯುತ್ತಿರುವ ಗ್ಯಾಸ್ ಪೈಪ್ಲೈನ್ನಿಂದಾಗಿ ರಸ್ತೆಗಳು ಹಾಳಾಗಿವೆ. ಕಾಮಗಾರಿಗಾಗಿ ಅಗೆಯಲಾಗಿರುವ ರಸ್ತೆಗಳನ್ನು ಸರಿಪಡಿಸಿಲ್ಲ. ಗುತ್ತಿಗೆದಾರರು ನಗರಸಭೆ ಅಧಿಕಾರಿಗಳಿಗೆ, ಸದಸ್ಯರಿಗೆ ಸ್ಪಂದಿಸುತ್ತಿಲ್ಲ. ಈ ಬಗ್ಗೆ ಗುತ್ತಿಗೆದಾರರ ವಿರುದ್ಧ ಶಿಸ್ತು ಕ್ರಮಕ್ಕೆ ಜಿಲ್ಲಾಧಿಕಾರಿಗೆ ಪ್ರಸ್ತಾವ ಸಲ್ಲಿಸಲು ಸದಸ್ಯರು ಸಲಹೆ ನೀಡಿದರು.

ಇದರ ಜತೆಗೆ ಸಭೆಯಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಗೈರು ಹಾಜರಾತಿ ಬಗ್ಗೆ, ನಗರಸಭೆಯಲ್ಲಿ ಖಾಲಿ ಇರುವ ಸಿಬ್ಬಂದಿ ಭರ್ತಿಗೆ ಕ್ರಮ ವಹಿಸುವ ಬಗ್ಗೆ, ವಿವಿಧ ಟೆಂಡರ್ ಪ್ರಕ್ರಿಯೆ ನಡೆಸುವುದು ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಚರ್ಚೆ ನಡೆಸಲಾಯಿತು.

ಉಪಾಧ್ಯಕ್ಷ ಲೋಕೇಶ್, ಸ್ಥಾಯಿ ಸಮಿತಿ ಅಧ್ಯಕ್ಷ ಕೋಟೆ ಚಂದ್ರು, ಪೌರಾಯುಕ್ತ ಮಹೇಂದ್ರ ಹಾಜರಿದ್ದರು.

ಸಭೆಯಿಂದ ಹೊರನಡೆದ ಆಡಳಿತ ಪಕ್ಷದ ಸದಸ್ಯೆ!

ನಗರಸಭೆ ಸಾಮಾನ್ಯ ಸಭೆ ಪ್ರಾರಂಭದಲ್ಲಿ ಆಡಳಿತ ಪಕ್ಷದ ಸದಸ್ಯೆ ಕಮಲಾ ರಾಮು ನಗರಸಭೆ ಆಡಳಿತ ವೈಖರಿ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿ ಸಭೆಯಿಂದ ಹೊರನಡೆದ ಘಟನೆ ನಡೆಯಿತು. ವಾರ್ಡ್ನಲ್ಲಿ ಸ್ವಚ್ಛತೆ ಸೇರಿದಂತೆ ಸಾಕಷ್ಟು ಸಮಸ್ಯೆಗಳಿವೆ. ಈ ಬಗ್ಗೆ ಅಧಿಕಾರಿಗಳ ಗಮನಕ್ಕೆ ತಂದರೂ ಯಾವುದೇ ಪ್ರಯೋಜನವಾಗುತ್ತಿಲ್ಲ. ಸಭೆಯಲ್ಲಿ ಸಮಸ್ಯೆ ಹೇಳಿಕೊಂಡರೂ ಸ್ಪಂದನೆ ಸಿಗುತ್ತಿಲ್ಲ. ಸಭೆ ನಡೆಸಿ ಪ್ರಯೋಜನವೇನು ಎಂದು ತೀವ್ರ ಅಸಮಾಧಾನ ವ್ಯಕ್ತಪಡಿಸಿ ಪ್ರಾರಂಭದಲ್ಲಿಯೇ ಸಭೆಯಿಂದ ಹೊರ ನಡೆದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.