ಚನ್ನಪಟ್ಟಣ: ಶುದ್ಧ ಕುಡಿಯುವ ನೀರು ಆರೋಗ್ಯಕರ ಸಮಾಜದ ಮೂಲಾಧಾರ. ಪ್ರತಿಯೊಬ್ಬರೂ ಶುದ್ಧ ಕುಡಿಯುವ ನೀರು ಉಪಯೋಗಿಸಬೇಕು ಎಂದು ಸಂಸದ ಡಾ. ಸಿ.ಎನ್. ಮಂಜುನಾಥ್ ಸಲಹೆ ನೀಡಿದರು.

ಭಾನುವಾರ ತಾಲ್ಲೂಕಿನ ವಿವಿಧೆಡೆ ಸಂಸದರ ನಿಧಿ ಹಾಗೂ ಕಾರ್ಪೋರೇಟ್ ಸಾಮಾಜಿಕ ಹೊಣೆಗಾರಿಕೆ (ಸಿಎಸ್ಆರ್) ಯೋಜನೆ ಅಡಿ ಕೈಗೊಳ್ಳಲಾದ ವಿವಿಧ ಅಭಿವೃದ್ಧಿ ಕಾಮಗಾರಿಗಳನ್ನು ಭಾನುವಾರ ಉದ್ಘಾಟಿಸಿ ಮಾತನಾಡಿದರು.

ಗ್ರಾಮೀಣ ಪ್ರದೇಶಗಳಲ್ಲಿ ಶುದ್ಧ ಕುಡಿಯುವ ನೀರು ಮತ್ತು ಸಾರ್ವಜನಿಕ ಸೌಕರ್ಯ ಪ್ರತಿ ನಾಗರಿಕನಿ ಮೂಲಭೂತ ಹಕ್ಕು. ಇದೇ ರೀತಿ ಬಸ್ ತಂಗುದಾಣ ನಿರ್ಮಾಣವಾಗಬೇಕಿದೆ ಎಂದು ಅಭಿಪ್ರಾಯಪಟ್ಟರು.

ರಾಮನರಸಿಂಹರಾಜಪುರ, ಶೀರಗುಡ್ಡ, ರಾಂಪುರ, ಕೂಡ್ಲೂರು, ಸಂತೆಮೊಗೇನಹಳ್ಳಿದೊಡ್ಡಿ, ಸುಳ್ಳೇರಿ ಮತ್ತು ಎ.ವಿ.ಹಳ್ಳಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ, ಬಸ್ ತಂಗುದಾಣ ಕಾಮಗಾರಿ ಉದ್ಘಾಟಿಸಿದರು.

ಬಿಜೆಪಿ ಜಿಲ್ಲಾಧ್ಯಕ್ಷ ಆನಂದಸ್ವಾಮಿ, ಜೆಡಿಎಸ್ ಜಿಲ್ಲಾ ಅಧ್ಯಕ್ಷ ಜಯಮುತ್ತು, ತಾಲ್ಲೂಕು ಅಧ್ಯಕ್ಷ ಗೋವಿಂದಹಳ್ಳಿ ನಾಗರಾಜು, ಡಾ.ಸುನೀತಾ ಮಹೇಶ್ವರಿ, ಡಾ. ಅರ್ಜುನ್ ಕಲ್ಯಾಣಪುರ, ದೀಪಿಕಾ ಬೇಡಿ, ಅಶ್ವಿನಿ ಸಿನ್ಹಾ, ಧನಲಕ್ಷ್ಮಿ, ವನಿಶ್ರೀ, ಸುಮಾ, ಅನಿಂದಿತಾ ಚೌಧುರಿ, ಸುರೇಶ್ ಕುಮಾರ್ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260323-14-1772439886

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.