ಶನಿವಾರ, 7 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ | ಹುಲ್ಲಿನ ವಿಷಯಕ್ಕೆ ದಾಯಾದಿ ಜಗಳ: ಕೊಲೆಯಲ್ಲಿ ಅಂತ್ಯ

Published 6 ಆಗಸ್ಟ್ 2024, 5:19 IST
Last Updated 6 ಆಗಸ್ಟ್ 2024, 5:19 IST
ಅಕ್ಷರ ಗಾತ್ರ

ಚನ್ನಪಟ್ಟಣ: ಹುಲ್ಲು ಕೊಯ್ಯುವ ವಿಷಯಕ್ಕೆ ದಾಯಾದಿಗಳ ನಡುವೆ ಶುರುವಾದ ಜಗಳ ಒಬ್ಬನ ಕೊಲೆಯಲ್ಲಿ ಅಂತ್ಯಗೊಂಡಿರುವ ಘಟನೆ ತಾಲ್ಲೂಕಿನ ದೊಡ್ಡನಹಳ್ಳಿ ಗ್ರಾಮದಲ್ಲಿ ಮಂಗಳವಾರ ಬೆಳಿಗ್ಗೆ ನಡೆದಿದೆ.

ರಂಜಿತ್ ಕುಮಾರ್(29)ಕೊಲೆಯಾದವರು. ಕೃತ್ಯ ಎಸಗಿದ ಅವರ ಚಿಕ್ಕಪ್ಪ ನಾಗರಾಜು ಹಾಗೂ ಪುತ್ರ ಸುನೀಲ್ ಕುಮಾರ್ ಶವವನ್ನು ರಸ್ತೆ ಬದಿ ಎಸೆದು ಪರಾರಿಯಾಗಿದ್ದಾರೆ.

ರಂಜಿತ್ ಕುಮಾರ್ ಅವರು ತನ್ನ ಜಮೀನಿನಲ್ಲಿ ಹುಲ್ಲು ಕೊಯ್ಯುವಾಗ ಆತನ ಚಿಕ್ಕಪ್ಪ, ಚಿಕ್ಕಮ್ಮ ಮತ್ತು ಪುತ್ರ ಸ್ಥಳಕ್ಕೆ ಬಂದು ಜಗಳವಾಡಿದ್ದಾರೆ. ನಂತರ ಅದೇ ದ್ವೇಷದಲ್ಲಿ ಬೆಳಗ್ಗಿನ ಜಾವ ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ರಂಜಿತ್ ಕುಮಾರ್ ಅವರಿಗೆ ಮಚ್ಚಿನಿಂದ ತಲೆಗೆ ಹೊಡೆದು ಕೊಲೆ ಮಾಡಿದ್ದಾರೆ ಎಂದು ಚನ್ನಪಟ್ಟಣ ಗ್ರಾಮಾಂತರ ಪೊಲೀಸರು ತಿಳಿಸಿದ್ದಾರೆ.

ವಿಷಯ ತಿಳಿದು ಸ್ಥಳಕ್ಕೆ ಭೇಟಿ ನೀಡಿ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಚನ್ನಪಟ್ಟಣ ಸರ್ಕಾರಿ ಆಸ್ಪತ್ರೆಗೆ ಸಾಗಿಸಲಾಗಿದೆ. ಇಬ್ಬರ ಬಂಧನಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT