ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಿಂಗರಾಜಿಪುರ: ಪ್ರತಿಭಟನೆ ಕೈಬಿಟ್ಟ ರೈತರು

Published 14 ಮಾರ್ಚ್ 2024, 6:37 IST
Last Updated 14 ಮಾರ್ಚ್ 2024, 6:37 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಸಿಂಗರಾಜಿಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಸಿಂಗರಾಜಿಪುರ ವೇಣುಗೋಪಾಲಕೃಷ್ಣಸ್ವಾಮಿ ರೈತಸಂಘದ ಪದಾಧಿಕಾರಿಗಳು ಮಂಗಳವಾರದಿಂದ ಆರಂಭಿಸಿದ್ದ ಅನಿರ್ದಿಷ್ಟಾವಧಿ ಪ್ರತಿಭಟನೆಯನ್ನು ಬುಧವಾರ ವಾಪಸ್ ಪಡೆದರು.

ಒತ್ತುವರಿಯಾಗಿರುವ ಸರ್ಕಾರಿ ಜಾಗಗಳನ್ನು ತೆರವುಗೊಳಿಸಿಲ್ಲ ಹಾಗೂ ಸಾರ್ವಜನಿಕರ ಕುಂದುಕೊರತೆಗಳನ್ನು ಬಗೆಹರಿಸಲು ಪಂಚಾಯಿತಿ ವಿಫಲವಾಗಿದೆ ಎಂದು ಆರೋಪಿಸಿ ರೈತಸಂಘದ ಪದಾಧಿಕಾರಿಗಳು ಪ್ರತಿಭಟನೆ ಆರಂಭಿಸಿದ್ದರು.

ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಣಾ ಅಧಿಕಾರಿ ಶಿವಕುಮಾರ್ ಅವರು ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ, ಒತ್ತುವರಿಯಾಗಿರುವ ಜಾಗ ಪರಿಶೀಲಿಸಿದರು. ಸಮಸ್ಯೆಗೆ ಶೀಘ್ರ ಪರಿಹಾರ ನೀಡುವ ಭರವಸೆ ನೀಡಿದ ನಂತರ ಪ್ರತಿಭಟನೆ ವಾಪಸ್ ಪಡೆದರು.

ಮೊದಲ ದಿನ ಪ್ರತಿಭಟನಾಕಾರರ ಮನವೊಲಿಸಲು ಗ್ರಾ.ಪಂ. ಅಧಿಕಾರಿಗಳು, ಗ್ರಾ.ಪಂ. ಸದಸ್ಯರು ಪ್ರಯತ್ನಿಸಿದ್ದರು. ಆದರೆ ಇದಕ್ಕೆ ಒಪ್ಪದ ಪ್ರತಿಭಟನಾಕಾರರು ಒತ್ತುವರಿಯಾಗಿರುವ ಸರ್ಕಾರಿ ಜಮೀನುಗಳ ಒತ್ತುವರಿ ತೆರವು ಮಾಡುವವರೆಗೂ ಪ್ರತಿಭಟನೆ ವಾಪಸ್ ತೆಗೆದುಕೊಳ್ಳುವುದಿಲ್ಲ ಎಂದು ಪಟ್ಟು ಹಿಡಿದು ಪ್ರತಿಭಟನೆ ಮುಂದುವರೆಸಿದ್ದರು.

ಅಹೋರಾತ್ರಿ ಪ್ರತಿಭಟನೆ ಮುಂದುವರೆದಿತ್ತು. ಪ್ರತಿಭಟನಾಕಾರರು ಗ್ರಾ.ಪಂ. ಕಚೇರಿ ಎದುರು ಮಲಗಿಕೊಂಡು ಪ್ರತಿಭಟನೆ ನಡೆಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT