ಚನ್ನಪಟ್ಟಣ: ಶಿಕ್ಷಕರ ವೃತ್ತಿ ಅತ್ಯಂತ ಪವಿತ್ರವಾದದ್ದು. ಸ್ವಸ್ಥ ಸಮಾಜ ನಿರ್ಮಾಣದಲ್ಲಿ ಶಿಕ್ಷಕರ ಪಾತ್ರ ನಿರ್ಣಾಯಕ. ಕತ್ತಲೆ ಕಳೆದು ಸುಜ್ಞಾನದ ಬೆಳಕು ಮೂಡಿಸುವ ಗುರುಗಳನ್ನು ಸದಾ ಸ್ಮರಿಸಿ, ಗೌರವಿಸುವುದು ಎಲ್ಲರ ಕರ್ತವ್ಯ ಎಂದು ಭಾರತ ವಿಕಾಸ್ ಪರಿಷತ್ ಅಧ್ಯಕ್ಷ ಪುಟ್ಟಸ್ವಾಮಿಗೌಡ ಅಭಿಪ್ರಾಯಪಟ್ಟರು.

ತಾಲ್ಲೂಕಿನ ಮಂಕುಂದ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಭಾರತ ವಿಕಾಸ್ ಪರಿಷತ್ ಕಣ್ವ ಶಾಖೆ ವತಿಯಿಂದ ಮಂಗಳವಾರ ಹಮ್ಮಿಕೊಂಡಿದ್ದ ಗುರುವಂದನೆ ಹಾಗೂ ವಿದ್ಯಾರ್ಥಿಗಳ ಅಭಿನಂದನಾ ಕಾರ್ಯಕ್ರಮದಲ್ಲಿ ಮಾತನಾಡಿದರು.

ಶಿಕ್ಷಕ ಆನಂದ್ ಅವರನ್ನು ಸತ್ಕರಿಸಲಾಯಿತು. ಭಾವಿಪ ಕಣ್ವ ಶಾಖೆಯ ಮಾಜಿ ಅಧ್ಯಕ್ಷ ವಸಂತಕುಮಾರ್ ಮಾತನಾಡಿದರು.

ಭಾವಿಪ ಪ್ರಾಂತ ಉಪಾಧ್ಯಕ್ಷ ಗುರುಮಾದಯ್ಯ, ಭಾವಿಪ ಕಾರ್ಯದರ್ಶಿ ಯೋಗೇಶ್ ಚಕ್ಕೆರೆ, ದಕ್ಷಿಣ ಪ್ರಾಂತ್ಯ ಗುರುವಂದನಾ ಕಾರ್ಯಕ್ರಮದ ಸಂಚಾಲಕ ಬೆಸ್ಕಾಂ ಶಿವಲಿಂಗಯ್ಯ, ಖಜಾಂಚಿ ವಿ.ಟಿ.ರಮೇಶ್, ಉಪಾಧ್ಯಕ್ಷ ಕರಿಯಪ್ಪ, ಪದಾಧಿಕಾರಿಗಳಾದ ಕೃಷ್ಣಕುಮಾರ್, ಟಿ.ಎನ್.ದೇವರಾಜು, ಮಂಕುಂದ ಸರ್ಕಾರಿ ಪ್ರೌಢಶಾಲೆಯ ಮುಖ್ಯಶಿಕ್ಷಕಿ ಶೋಭಾ, ಎಸ್ ಡಿಎಂಸಿ ಅಧ್ಯಕ್ಷ ಬೀರಯ್ಯ, ಉಪಾಧ್ಯಕ್ಷೆ ಹರ್ಷಿತಾ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.