ಚನ್ನಪಟ್ಟಣ: ತಾಲ್ಲೂಕಿನ ಹುಲುವಾಡಿ ಗ್ರಾಮದ ಸಾಮರ್ಥ್ಯ ಮಹಿಳಾ ಟ್ರಸ್ಟ್ ಹಾಗೂ ಬೆಂಗಳೂರಿನ ಸಂಘಮಿತ್ರ ಗ್ರಾಮೀಣ ಹಣಕಾಸು ಸೇವಾ ಸಂಸ್ಥೆ ವತಿಯಿಂದ ತಾಲ್ಲೂಕಿನ ಸಿಂಗರಾಜಿಪುರ ಗ್ರಾಮದಲ್ಲಿ ಈಚೆಗೆ ವಿಶ್ವ ಮಹಿಳಾ ದಿನಾಚರಣೆ, ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಆಯೋಜಿಸಲಾಗಿತ್ತು.

ಕಾರ್ಯಕ್ರಮ ಉದ್ಘಾಟಿಸಿದ ಸಂಘಮಿತ್ರ ಸಂಸ್ಥೆ ಸಿಇಒ ಸುನೀಲ್ ಮಾತನಾಡಿ, ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿಯೂ ಸಾಧನೆ ಮಾಡಬೇಕು. ಸರ್ಕಾರ ಮಹಿಳೆಯರ ಸಬಲೀಕರಣಕ್ಕೆ ಹಲವು ಸೌಲಭ್ಯ ನೀಡಿದೆ. ಅವುಗಳನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು.

ಪ್ರಾಧ್ಯಾಪಕ ಅಪ್ಪಗೆರೆ ಪ್ರದೀಪ್ ಮಾತನಾಡಿ, ಅಂಬೇಡ್ಕರ್ ಅವರು ಸರ್ವಜನಾಂಗದ ನಾಯಕರು. ಅವರು ಮಹಿಳೆಯರಿಗೆ ಸಂವಿಧಾನದ ಮೂಲಕ ಹಲವು ಹಕ್ಕು ನೀಡಿದ್ದಾರೆ. ಅವುಗಳ ಸದುಪಯೋಗವಾಗಬೇಕು ಎಂದರು.

ಸಿಂಗರಾಜಿಪುರ ಗ್ರಾ.ಪಂ.ಪಿಡಿಒ ರಾಮಕೃಷ್ಣ ಅಧ್ಯಕ್ಷತೆ ವಹಿಸಿದ್ದರು. ಟ್ರಸ್ಟ್ ಕಾರ್ಯದರ್ಶಿ ನೀಲವೇಣಿ ಪ್ರಾಸ್ತಾವಿಕವಾಗಿ ಮಾತನಾಡಿದರು. ರಾಮನಗರ ಮಾನಸಿಕ ಆರೋಗ್ಯ ಕೇಂದ್ರದ ಆಪ್ತ ಸಮಾಲೋಚಕಿ ಪದ್ಮರೇಖಾ, ಸಂಘಮಿತ್ರ ಸಂಸ್ಥೆ ಪ್ರಾದೇಶಿಕ ವ್ಯವಸ್ಥಾಪಕರಾದ ಪ್ರಸಾದ್, ಬಸವಣ್ಣ, ಸಂಪನ್ಮೂಲ ವ್ಯಕ್ತಿ ಶಿವಕುಮಾರ್, ಮುಖಂಡರಾದ ಕಾಂತರಾಜು, ಎಸ್.ಪೂರ್ಣಿಮಾ ಇತರರು ಭಾಗವಹಿಸಿದ್ದರು.ಚಾಮುಂಡೇಶ್ವರಿ ವೈದ್ಯಕೀಯ ಮಹಾವಿದ್ಯಾಲಯ ಆಸ್ಪತ್ರೆ ಮತ್ತು ಸಂಶೋಧನಾ ಸಂಸ್ಥೆ ವತಿಯಿಂದ ಆರೋಗ್ಯ ಶಿಬಿರವನ್ನು ನಡೆಸಲಾಯಿತು. ಕಣ್ಣಿನ ತಪಾಸಣೆ, ರಕ್ತದೊತ್ತಡ, ಸಕ್ಕರೆ ಕಾಯಿಲೆ ಬಗ್ಗೆ ಉಚಿತ ತಪಾಸಣೆ ನಡೆಸಿ, ಮಹಿಳೆಯರಲ್ಲಿ ಹೆಚ್ಚುತ್ತಿರುವ ಸ್ತನ ಕ್ಯಾನ್ಸರ್, ಗರ್ಭಕೋಶ ಕ್ಯಾನ್ಸರ್ ಬಗ್ಗೆ ಅರಿವು ಮುಡಿಸಲಾಯಿತು.

ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದ ಮಹಿಳೆಯರಿಗೆ ಬಹುಮಾನ ವಿತರಿಸಲಾಯಿತು. ಸ್ವಸಹಾಯ ಸಂಘದ ಅಧ್ಯಕ್ಷರು, ಸದಸ್ಯರು, ಇತರರು ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260502-14-657531156

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.