ರಾಮನಗರದ ಅವ್ವೇರಹಳ್ಳಿ ಗ್ರಾಮದ ಕರ್ನಾಟಕ ಪಬ್ಲಿಕ್ ಶಾಲೆಯ ಆವರಣದಲ್ಲಿ ಮಂಗಳವಾರ ನಡೆದ ಜಿಲ್ಲಾ ಮಟ್ಟದ ಕಬ್ಬಡಿ ಪಂದ್ಯಾವಳಿಯಲ್ಲಿ 14 ವರ್ಷ ವಯೋಮಿತಿಯ ಬಾಲಕರ ವಿಭಾಗದಲ್ಲಿ ಶಾಲೆಯ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಗಳಿಸಿ ವಿಭಾಗೀಯಮಟ್ಟಕ್ಕೆ ಆಯ್ಕೆಯಾದರು. ವಿದ್ಯಾರ್ಥಿಗಳನ್ನು ಶಾಲೆಯ ಕಾರ್ಯದರ್ಶಿ ಕಿರಣ್ ಪ್ರಸಾದ್, ಮುಖ್ಯಶಿಕ್ಷಕಿ ಇಂದುರಾಜ್, ದೈಹಿಕ ಶಿಕ್ಷಕ ವೆಂಕಟಾಚಲ, ಶಿಕ್ಷಕ ವರ್ಗ, ಸಿಬ್ಬಂದಿ ಅಭಿನಂದಿಸಿದರು.