ಚನ್ನಪಟ್ಟಣ: ತಾಲ್ಲೂಕಿನ 19 ಕೆರೆಗಳಿಗೆ ನೀರು ಹರಿಸಲು ₹19ಕೋಟಿ ವೆಚ್ಚದಲ್ಲಿ ಪ್ರತ್ಯೇಕ ಪೈಪ್ಲೈನ್ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಸಿ.ಪಿ.ಯೋಗೇಶ್ವರ್ ತಿಳಿಸಿದರು.

ತಾಲ್ಲೂಕಿನ ಭೂಹಳ್ಳಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಗ್ರಾಮದ ಕೆರೆಗೆ ನೀರು ತುಂಬಿಸುವ ಪೈಪ್ಲೈನ್ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ತಾಲ್ಲೂಕಿನ 120ಕ್ಕೂ ಹೆಚ್ಚು ಕೆರೆಗಳಿಗೆ ಒಂದೇ ಪೈಪ್ಲೈನ್ ಮೂಲಕ ನೀರು ತುಂಬಿಸಲಾಗುತ್ತಿತ್ತು. ಈಗ ಈ ಭಾಗದ ಕೆರೆಗಳಿಗೆ ಪ್ರತ್ಯೇಕ ಪೈಪ್ಲೈನ್ ನಿರ್ಮಿಸಲಾಗುತ್ತಿದೆ’ ಎಂದು ಹೇಳಿದರು.

ಬಿ.ವಿ.ಹಳ್ಳಿ ಕೆರೆ, ಮೆಣಸಿಗನಹಳ್ಳಿ ಹೊಸಕೆರೆ ಸೇರಿದಂತೆ ಈ ಭಾಗದ 19 ಕೆರೆಗಳಿಗೆ ನೀರು ಹರಿಸಿ ಅಂತರ್ಜಲ ಹೆಚ್ಚಿಸುವ ಕಾರ್ಯ ಮಾಡಲಾಗುವುದು. ತಾಲ್ಲೂಕಿನ ದೊಡ್ಡನಹಳ್ಳಿ ಮತ್ತು ಮಲ್ಲಂಗೆರೆ ಗ್ರಾಮಗಳಲ್ಲಿ ಹೊಸಕೆರೆಗಳನ್ನು ನಿರ್ಮಿಸಿ ರಾಮನಗರದ ಕಡೆಯಿಂದ ನೀರು ಹರಿಸುವ ಯೋಜನೆ ರೂಪಿಸಲಾಗಿದೆ. ಮುಂಬರುವ ಬೇಸಿಗೆಯಲ್ಲಿ ತಾಲ್ಲೂಕಿನ ಕೆರೆಗಳಲ್ಲಿ ನೀರು ಸಂಗ್ರಹ ಇರುವಂತೆ ನೋಡಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ತಾಲ್ಲೂಕಿನ ಬಿ.ವಿ.ಹಳ್ಳಿ ಬಳಿ ಮುತ್ತುರಾಯಸ್ವಾಮಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿ, ಕೋಡಿಹೊಸಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ಭೂಹಳ್ಳಿ ಗ್ರಾಮದಲ್ಲಿ ಚರಂಡಿ ಕಾಮಗಾರಿ, ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಮುದಾಯ ಭವನ ನಿರ್ಮಾಣ ಸೇರಿದಂತೆ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.

ಬಮುಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಮುಖಂಡರಾದ ಸಿಂಗರಾಜಪುರ ರಾಜಣ್ಣ, ಗಂಗಾಧರ್, ಪಾಪಣ್ಣ, ಪ್ರದೀಪ್ ಕುಮಾರ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಚನ್ನಪಟ್ಟಣ: ತಾಲ್ಲೂಕಿನ 19 ಕೆರೆಗಳಿಗೆ ನೀರು ಹರಿಸಲು ರೂ. 19 ಕೋಟಿ ವೆಚ್ಚದಲ್ಲಿ ಪ್ರತ್ಯೇಕ ಪೈಪ್ ಲೈನ್ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ಶಾಸಕ ಸಿ.ಪಿ. ಯೋಗೇಶ್ವರ್ ತಿಳಿಸಿದರು.
ತಾಲ್ಲೂಕಿನ ಭೂಹಳ್ಳಿ ಗ್ರಾಮದಲ್ಲಿ ಕಾವೇರಿ ನೀರಾವರಿ ನಿಗಮದ ವತಿಯಿಂದ ಗ್ರಾಮದ ಕೆರೆಗೆ ನೀರು ತುಂಬಿಸುವ ಪೈಪ್ ಲೈನ್ ಕಾಮಗಾರಿಗೆ ಸೋಮವಾರ ಭೂಮಿಪೂಜೆ ನೆರವೇರಿಸಿ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಾಲ್ಲೂಕಿನ 120ಕ್ಕೂ ಹೆಚ್ಚು ಕೆರೆಗಳಿಗೆ ಒಂದೇ ಪೈಪ್ ಲೈನ್ ಮೂಲಕ ನೀರು ತುಂಬಿಸಲಾಗುತ್ತಿತ್ತು. ಈಗ ಈ ಭಾಗದ ಕೆರೆಗಳಿಗೆ ನೀರು ತುಂಬಿಸಲು ಪ್ರತ್ಯೇಕ ಪೈಪ್ ಲೈನ್ ಮಾಡಲಾಗುತ್ತಿದೆ ಎಂದು ತಿಳಿಸಿದರು.

ಈ ಭಾಗದ ಬಿ.ವಿ.ಹಳ್ಳಿ ಕೆರೆ, ಮೆಣಸಿಗನಹಳ್ಳಿ ಹೊಸಕೆರೆ ಸೇರಿದಂತೆ ಈ ಭಾಗದ ಕೆರೆಗಳಿಗೆ ನೀರು ಹರಿಸಿ ಈ ಭಾಗದಲ್ಲಿ ಅಂತರ್ಜಲ ಹೆಚ್ಚಿಸುವ ಕಾರ್ಯ ಮಾಡಲಾಗುವುದು. ಇದರ ಜೊತೆಗೆ ತಾಲ್ಲೂಕಿನ ದೊಡ್ಡನಹಳ್ಳಿ ಹಾಗೂ ಮಲ್ಲಂಗೆರೆ ಗ್ರಾಮಗಳಲ್ಲಿ ಹೊಸಕೆರೆಗಳನ್ನು ನಿರ್ಮಾಣ ಮಾಡಿ ರಾಮನಗರದ ಕಡೆಯಿಂದ ಆ ಕೆರೆಗಳಿಗೆ ನೀರು ಹರಿಸುವ ಯೋಜನೆ ರೂಪಿಸಲಾಗಿದೆ. ಮುಂಬರುವ ಬೇಸಿಗೆಯಲ್ಲಿ ತಾಲ್ಲೂಕಿನ ಕೆರೆಗಳಲ್ಲಿ ನೀರು ಸಂಗ್ರಹ ಇರುವಂತೆ ನೋಡಿಕೊಳ್ಳಲಾಗುವುದು ಎಂದು ತಿಳಿಸಿದರು.
ಇದೇ ವೇಳೆ ಯೋಗೇಶ್ವರ್ ಅವರು ತಾಲ್ಲೂಕಿನ ಬಿ.ವಿ.ಹಳ್ಳಿ ಬಳಯ ಮುತ್ತುರಾಯಸ್ವಾಮಿ ದೇವಸ್ಥಾನಕ್ಕೆ ತೆರಳುವ ರಸ್ತೆ ಅಭಿವೃದ್ಧಿ ಕಾಮಗಾರಿ, ಕೋಡಿಹೊಸಳ್ಳಿ ಗ್ರಾಮದಲ್ಲಿ ಅಂಗನವಾಡಿ ಕಟ್ಟಡ ನಿರ್ಮಾಣ, ಭೂಹಳ್ಳಿ ಗ್ರಾಮದಲ್ಲಿ ಚರಂಡಿ ಕಾಮಗಾರಿ, ಆಂಜನೇಯಸ್ವಾಮಿ ದೇವಸ್ಥಾನದ ಆವರಣದಲ್ಲಿ ಸಮುದಾಯಭವನ ಕಾಮಗಾರಿ ಸೇರಿದಂತೆ ಹಲವು ಕಾಮಗಾರಿಗಳಿಗೆ ಭೂಮಿಪೂಜೆ ನೆರವೇರಿಸಿದರು.
ಬಮೂಲ್ ನಿರ್ದೇಶಕ ಎಸ್.ಲಿಂಗೇಶ್ ಕುಮಾರ್, ಮುಖಂಡರಾದ ಸಿಂಗರಾಜಪುರ ರಾಜಣ್ಣ, ಗಂಗಾಧರ್, ಪಾಪಣ್ಣ, ಪ್ರದೀಪ್ ಕುಮಾರ್, ಸ್ಥಳೀಯ ಮುಖಂಡರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.