ಶನಿವಾರ, 13 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ದಾಖಲೆ ಇಲ್ಲದ ₹ 1 ಲಕ್ಷ ನಗದು ವಶ

Published 20 ಮಾರ್ಚ್ 2024, 16:20 IST
Last Updated 20 ಮಾರ್ಚ್ 2024, 16:20 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಕೋಲೂರು ಗೇಟ್ ಬಳಿಯ ಚೆಕ್ ಪೋಸ್ಟ್‌ನಲ್ಲಿ ಅಗತ್ಯ ದಾಖಲೆ ಇಲ್ಲದ ₹ 1 ಲಕ್ಷ ನಗದನ್ನು ಚುನಾವಣಾ ತನಿಖಾ ತಂಡ ಬುಧವಾರ ವಶಪಡಿಸಿಕೊಂಡಿದೆ.

ಬೆಂಗಳೂರು ಮೈಸೂರು ಹೆದ್ದಾರಿಯ ಕೋಲೂರು ಗೇಟ್ ಬಳಿ ನಿರ್ಮಿಸಿರುವ ಚೆಕ್ ಪೋಸ್ಟ್‌ನಲ್ಲಿ ವಾಹನಗಳ ತಪಾಸಣೆ ನಡೆಸುತ್ತಿದ್ದ ವೇಳೆ ಕಾರೊಂದರಲ್ಲಿ ಅಗತ್ಯ ದಾಖಲೆ ಇಲ್ಲದೆ ಸಾಗಿಸುತ್ತಿದ್ದ ₹ 1 ಲಕ್ಷ ನಗದು ಇರುವುದು ಪತ್ತೆಯಾಗಿದೆ.

ಕಾರು ಚಾಲಕನನ್ನು ಈ ಬಗ್ಗೆ ವಿಚಾರಣೆ ನಡೆಸಿದಾಗ ಅಗತ್ಯ ದಾಖಲೆ ಒದಗಿಸಲು ವಿಫಲವಾದ ಕಾರಣ ನಗದು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಕಾರು ಹಾಗೂ ಚಾಲಕನನ್ನು ವಶಕ್ಕೆ ಪಡೆಯಲಾಗಿದೆ. ಈ ಬಗ್ಗೆ ನಗರದ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT