ಚನ್ನಪಟ್ಟಣ: ಇಲ್ಲಿನ ನಗರಸಭೆ ಎರಡನೇ ಅವಧಿ ಅಧ್ಯಕ್ಷರಾಗಿ ವಾಸಿಲ್ ಆಲಿಖಾನ್ ಹಾಗೂ ಉಪಾಧ್ಯಕ್ಷರಾಗಿ ಶ್ರೀನಿವಾಸಮೂರ್ತಿ ಅವಿರೋಧವಾಗಿ ಆಯ್ಕೆಯಾದರು.

ನಗರಸಭೆ ಸಭಾಂಗಣದಲ್ಲಿ ಶನಿವಾರ ನಡೆದ ಅಧ್ಯಕ್ಷ–ಉಪಾಧ್ಯಕ್ಷ ಚುನಾವಣೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ವಾಸಿಲ್ ಆಲಿಖಾನ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ಶ್ರೀನಿವಾಸಮೂರ್ತಿ ಮಾತ್ರ ನಾಮಪತ್ರ ಸಲ್ಲಿಸಿದ್ದ ಕಾರಣ ಅವಿರೋಧ ಆಯ್ಕೆ ನಡೆಯಿತು. ರಾಮನಗರ ಉಪವಿಭಾಗಾಧಿಕಾರಿ ಬಿನೋಯ್ ಚುನಾವಣಾಧಿಕಾರಿಯಾಗಿ ಕಾರ್ಯನಿರ್ವಹಿಸಿದರು.

31 ಸದಸ್ಯ ಬಲದ ನಗರಸಭೆಯಲ್ಲಿ 16 ಮಂದಿ ಜೆಡಿಎಸ್ನಿಂದ, 7ಮಂದಿ ಬಿಜೆಪಿಯಿಂದ, 7 ಮಂದಿ ಕಾಂಗ್ರೆಸ್ನಿಂದ ಹಾಗೂ ಒಬ್ಬರು ಪಕ್ಷೇತರವಾಗಿ (ಮಹಿಳೆ) ಆಯ್ಕೆಯಾಗಿದ್ದರು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಜೆಡಿಎಸ್ನ 12 ಮಂದಿ, ಬಿಜೆಪಿ 6 ಮಂದಿ ಕಾಂಗ್ರೆಸ್ಗೆ ಸೇರ್ಪಡೆಯಾಗಿದ್ದರು. ಹಾಗಾಗಿ ಕಾಂಗ್ರೆಸ್ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನವನ್ನು ನಿರಾಯಾಸವಾಗಿ ಪಡೆದುಕೊಂಡಿತು.

ನಗರಸಭೆ ಎರಡನೇ ಅವಧಿ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳಿಗೆ ಮೂಲ ಕಾಂಗ್ರೆಸ್ಸಿಗರು ಹಾಗೂ ವಲಸಿಗ ಕಾಂಗ್ರೆಸ್ಸಿಗರು ಎನ್ನುವ ಪೈಪೋಟಿ ಎದುರಾಗಿದ್ದ ಕಾರಣ ಯಾರಿಗೆ ಪಟ್ಟ ಒಲಿಯಲಿದೆ ಎನ್ನುವ ಕುತೂಹಲ ಮೂಡಿತ್ತು. ಶಾಸಕ ಸಿ.ಪಿ.ಯೋಗೇಶ್ವರ್ ಹಾಗೂ ಡಿ.ಕೆ ಸಹೋದರರ ನೇತೃತ್ವದಲ್ಲಿ ಬೆಂಗಳೂರಿನಲ್ಲಿ ನಡೆದಿದ್ದ ಸಭೆಯಲ್ಲಿ 30 ತಿಂಗಳ ಅವಧಿಯನ್ನು ಇಬ್ಬರಿಗೆ ಅಧಿಕಾರ ಹಂಚಿಕೆ ಮಾಡುವ ಸೂತ್ರ ಅನುಸರಿಸಲು ನಿರ್ಧರಿಸಲಾಗಿತ್ತು.

ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ವಿಪ್ ನೀಡಲಾಗಿತ್ತು. ಯಾವುದೇ ಗೊಂದಲಕ್ಕೆ ಆಸ್ಪದವಿಲ್ಲದಂತೆ ಅಧ್ಯಕ್ಷರಾಗಿ ವಾಸಿಲ್ ಆಲಿಖಾನ್, ಉಪಾಧ್ಯಕ್ಷರಾಗಿ ಶ್ರೀನಿವಾಸಮೂರ್ತಿಯನ್ನು ಆಯ್ಕೆ ಮಾಡಲಾಯಿತು. ಚುನವಾಣೆಗೂ ಮೊದಲು ಕಾಂಗ್ರೆಸ್ ಸದಸ್ಯರು ನಗರದ ಹೊರವಲಯದ ಖಾಸಗಿ ಹೋಟೆಲ್ನಲ್ಲಿ ಸಭೆ ನಡೆಸಿ, ನಂತರ ನೇರವಾಗಿ ನಗರಸಭೆಗೆ ಆಗಮಿಸಿದರು.

ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನು ಬಿಎಂಐಸಿಪಿಎ ಅಧ್ಯಕ್ಷ ರಘುನಂದನ್ ರಾಮಣ್ಣ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಗಂಗಾಧರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ಸುನೀಲ್, ನಗರಸಭೆ ಸದಸ್ಯರು, ಸ್ಥಳೀಯ ಕಾಂಗ್ರೆಸ್ ಮುಖಂಡರು ಅಭಿನಂದಿಸಿದರು.

ಕಾಂಗ್ರೆಸ್ ಕಾರ್ಯಕರ್ತರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.