ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ಶಾಲಾ ವಾಹನ ಅಪಘಾತ: ಮಕ್ಕಳು ಪಾರು

Published 17 ಜನವರಿ 2024, 6:48 IST
Last Updated 17 ಜನವರಿ 2024, 6:48 IST
ಅಕ್ಷರ ಗಾತ್ರ

ಚನ್ನಪಟ್ಟಣ: ಬೆಂಗಳೂರು–ಮೈಸೂರು ಹೆದ್ದಾರಿಯ ಕೆಂಗಲ್ ಬಳಿ ಮಂಗಳವಾರ ಸಂಜೆ ಎದುರಿನಿಂದ ಬಂದ ವಾಹನಕ್ಕೆ ಶಾಲಾ ವಾಹನ ಡಿಕ್ಕಿ ಹೊಡೆದಿದೆ. ಬಿಜಿಎಸ್ ಶಾಲಾ ವಾಹನದಲ್ಲಿದ್ದ ಮಕ್ಕಳು ಯಾವುದೇ ಅಪಾಯ ಇಲ್ಲದೆ ಪಾರಾಗಿದ್ದಾರೆ. 

ಶಾಲಾ ವಾಹನ ಚಲಾಯಿಸುತ್ತಿದ್ದ ಚಾಲಕ ಮದ್ಯಪಾನ ಮಾಡಿದ್ದ ಎಂದು ಆರೋಪಿಸಿ ಸಾರ್ವಜನಿಕರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಶಾಲಾ ವಾಹನ ಜಖಂಗೊಂಡಿದೆ.

ನಗರದ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಾಲಕನನ್ನು ವಶಕ್ಕೆ ಪಡೆದಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT