ಚನ್ನಪಟ್ಟಣ: ಶಾಲಾ ದಾಖಲಾತಿ ಆಂದೋಲನ ಅಂಗವಾಗಿ ಎಸ್ಡಿಎಂಸಿ ಸಮನ್ವಯ ಕೇಂದ್ರ ವೇದಿಕೆದಿಂದ ಮಂಗಳವಾರ ತಾಲ್ಲೂಕಿನ ಕೆಂಗಲ್ ಆಂಜನೇಯಸ್ವಾಮಿ ದೇವಸ್ಥಾನದ ಆವರಣದಿಂದ ಜನಜಾಗೃತಿ ಜಾಥಾ ನಡೆಯಿತು.

ವೇದಿಕೆಯ ಪದಾಧಿಕಾರಿಗಳು, ಶಿಕ್ಷಕರು, ಪೋಷಕರು ಹಾಗೂ ಕಾರ್ಯಕರ್ತರು ತಾಲ್ಲೂಕಿನ ಶಿಕ್ಷಣ ಜಾಗೃತಿಯ ಘೋಷಣೆಗಳೊಂದಿಗೆ ಜನಜಾಗೃತಿ ಜಾಥಾ ನಡೆಸಿ ಶಾಲಾ ದಾಖಲಾತಿಯ ಮಹತ್ವವನ್ನು ಜನರಿಗೆ ಮನವರಿಕೆ ಮಾಡಿಕೊಟ್ಟರು.

ಜಾಥಾ ವೇಳೆ ಕಾರ್ಯಕರ್ತರು ಶಿಕ್ಷಣದ ಮಹತ್ವ ಸಾರುವ ಘೋಷಣೆ ಕೂಗುತ್ತಾ ಜಿಲ್ಲೆಯ ವಿವಿಧ ಭಾಗಗಳಲ್ಲಿ ಸಂಚರಿಸಿ, ಮನೆ, ಮನೆ ಭೇಟಿ, ತಾಂಡಾಗಳು, ಜಿಲ್ಲೆಯ ಗಡಿಭಾಗದ ಕುಗ್ರಾಮಗಳು ಹಾಗೂ ಶಾಲೆಗಳಿಗೆ ಭೇಟಿ ನೀಡಿ ಅರಿವು ಮೂಡಿಸಿದರು.

ಜಾಥಾಕ್ಕೆ ಚಾಲನೆ ನೀಡಿ ಮಾತನಾಡಿದ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕ ಸ್ವಾಮಿ, ಪ್ರತಿಯೊಬ್ಬ ಮಗುವಿಗೂ ಶಿಕ್ಷಣ ಸಿಗುವುದು ಸಂವಿಧಾನಾತ್ಮಕ ಹಕ್ಕು. ಯಾವುದೇ ಮಗು ಶಿಕ್ಷಣದಿಂದ ವಂಚಿತವಾಗದಂತೆ ಪೋಷಕರು ಹಾಗೂ ಸಮಾಜ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸಬೇಕು. ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ, ಅಗತ್ಯ ಮೂಲಸೌಕರ್ಯ ಹಾಗೂ ವಿದ್ಯಾರ್ಥಿ ಸ್ನೇಹಿ ವಾತಾವರಣ ಲಭ್ಯವಿದೆ. ಹೆಚ್ಚಿನ ಸಂಖ್ಯೆಯಲ್ಲಿ ಮಕ್ಕಳನ್ನು ದಾಖಲಾತಿ ಮಾಡಿಸುವ ಜವಾಬ್ದಾರಿ ಎಲ್ಲರ ಮೇಲಿದೆ ಎಂದರು.

ಪ್ರತಿಯೊಂದು ಹಳ್ಳಿ, ಪ್ರತಿಯೊಂದು ಕುಟುಂಬದ ಬಾಗಿಲು ತಟ್ಟಿ ಶಿಕ್ಷಣದ ಮಹತ್ವ ತಿಳಿಸುವ ಮೂಲಕ ದಾಖಲಾತಿ ಪ್ರಮಾಣ ಹೆಚ್ಚಿಸಲು ವೇದಿಕೆ ನಿರಂತರವಾಗಿ ಶ್ರಮಿಸುತ್ತಿದೆ ಎಂದು ವೇದಿಕೆಯ ಜಿಲ್ಲಾ ಘಟಕದ ಅಧ್ಯಕ್ಷ ಎಸ್.ಎಲ್.ವಿ. ವೆಂಕಟೇಶ್ ತಿಳಿಸಿದರು.

ಜಿಲ್ಲಾ ಕಾರ್ಯದರ್ಶಿ ಕೋಲೂರು ಯಶೋಧ, ಜಂಟಿ ಕಾರ್ಯದರ್ಶಿಗಳಾದ ಮಾಗಡಿ ಶಶಿಧರ್, ಕನಕಪುರ ಸೈಯದ್ ಸಜ್ಜದ್ ಅಹಮದ್, ಹಾರೋಹಳ್ಳಿಯ ಕುಮಾರ್, ಮಾಗಡಿ ತಾಲ್ಲೂಕು ಘಟಕದ ಅಧ್ಯಕ್ಷ ರೇವಣ್ಣ, ಚನ್ನಪಟ್ಟಣ ತಾಲೂಕು ಘಟಕದ ಅಧ್ಯಕ್ಷ ಕೃಷ್ಣಮೂರ್ತಿ, ಕಾರ್ಯದರ್ಶಿ ಡಿ.ಲೋಕೇಶ್, ಸಣ್ಣೇಗೌಡ ಭಾಗವಹಿಸಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260604-14-1687681584

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.