ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ: ಏಪ್ರಿಲ್ 2ರಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ರೋಡ್ ಶೋ- ಡಾ.ಮಂಜುನಾಥ್

Published 31 ಮಾರ್ಚ್ 2024, 7:49 IST
Last Updated 31 ಮಾರ್ಚ್ 2024, 7:49 IST
ಅಕ್ಷರ ಗಾತ್ರ

ರಾಮನಗರ: ‘ಕೇಂದ್ರ ಗೃಹ ಸಚಿವ‌ ಅಮಿತ್ ಶಾ ಅವರು ಏಪ್ರಿಲ್ 2ರಂದು ಚನ್ನಪಟ್ಟಣದಲ್ಲಿ ರೋಡ್ ಶೋ ನಡೆಸುವ ಮೂಲಕ, ಮೈತ್ರಿಪಕ್ಷದ ಕಾರ್ಯಕರ್ತರಿಗೆ ಹೊಸ‌ ಶಕ್ತಿ ತುಂಬಲಿದ್ದಾರೆ’ ಎಂದು‌ ಮೈತ್ರಿಕೂಟದ ಬಿಜೆಪಿ ಅಭ್ಯರ್ಥಿ‌ ಡಾ. ಸಿ.ಎನ್. ಮಂಜುನಾಥ್ ಹೇಳಿದರು.

ಬಿಜೆಪಿ ರೈತ ಮೋರ್ಚಾ ನಗರದಲ್ಲಿ ಭಾನುವಾರ ಹಮ್ಮಿಕೊಂಡಿದ್ದ ಸಭೆಯಲ್ಲಿ ಭಾಗವಹಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಚುನಾವಣೆ ಘೋಷಣೆ ಬಳಿಕ ಮೊದಲ ಸಲ ರಾಜ್ಯಕ್ಕೆ ಭೇಟಿ ನೀಡಲಿರುವ ಅಮಿತ್ ಶಾ ಅವರು, ಬೆಂಗಳೂರಿನಲ್ಲಿ ಸಭೆ ಮತ್ತು ಕಾರ್ಯಕ್ರಮ ಮುಗಿಸಿಕೊಂಡು ಚನ್ನಪಟ್ಟಣಕ್ಕೆ ಬರಲಿದ್ದಾರೆ. ರೋಡ್ ಶೋ ನಡೆಸಿ ನನ್ನ ಪರವಾಗಿ ಮತ ಯಾಚಿಸಲಿದ್ದಾರೆ’ ಎಂದರು.

‘ಅಮಿತ್ ಶಾ ಅವರೊಂದಿಗೆ ಬಿಜೆಪಿಯ ರಾಜ್ಯ ನಾಯಕರಾದ ಬಿ.ವೈ. ವಿಜಯೇಂದ್ರ, ಆರ್. ಅಶೋಕ ಸೇರಿದಂತೆ ಹಲವರು ಭಾಗವಹಿಸಲಿದ್ದಾರೆ. ಜೆಡಿಎಸ್ ವರಿಷ್ಠರಾದ ಎಚ್‌.ಡಿ. ದೇವೇಗೌಡರು ಮತ್ತು ಎಚ್‌.ಡಿ. ಕುಮಾರಸ್ವಾಮಿ ಅವರು ಸಹ ಕ್ಷೇತ್ರದಲ್ಲಿ ಪ್ರಚಾರ ಕಾರ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.

4ಕ್ಕೆ ನಾಮಪತ್ರ: ‘ಏಪ್ರಿಲ್ 4ರಂದು ಬೆಳಿಗ್ಗೆ 11 ಗಂಟೆಗೆ ನಾಮಪತ್ರ ಸಲ್ಲಿಸುವೆ. ಅಂದು ನಡೆಯುವ ಮೆರವಣಿಗೆ ಹಾಗೂ ಬಹಿರಂಗ ಸಮಾವೇಶದ ಕುರಿತು ರೂಪುರೇಷೆ ಸಿದ್ದಪಡಿಸಲಾಗುತ್ತಿದೆ. ಎರಡೂ ಪಕ್ಷಗಳ ನಾಯಕರು ಹಾಗೂ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಲಿದ್ದಾರೆ’ ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT