ಗುರುವಾರ, 22 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚನ್ನಪಟ್ಟಣ | ಕಾಡಾನೆ ದಾಳಿ: ಬೆಳೆ ನಾಶ

Published 16 ಜನವರಿ 2024, 6:09 IST
Last Updated 16 ಜನವರಿ 2024, 6:09 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ತಗಚಗೆರೆ ಹಾಗೂ ಸಂತೆಮೊಗಳ್ಳಿ ಗ್ರಾಮಗಳಲ್ಲಿ ಕಾಡಾನೆಗಳು ದಾಳಿ ನಡೆಸಿ ರೈತರ ಟೊಮೆಟೊ ಹಾಗೂ ತೆಂಗಿನ ಸಸಿಗಳನ್ನು ತುಳಿದು ಧ್ವಂಸ ಮಾಡಿರುವ ಘಟನೆ ಭಾನುವಾರ ರಾತ್ರಿ ನಡೆದಿದೆ.

ಗ್ರಾಮದ ರೈತ ಪ್ರಸನ್ನಕುಮಾರ್ ಅವರ ಒಂದೂವರೆ ಎಕರೆ ಭೂಮಿಯಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಗೆ ನುಗ್ಗಿರುವ ಕಾಡಾನೆಗಳು ಧ್ವಂಸ ಮಾಡಿವೆ. ನಂತರ ಅದೇ ಜಮೀನಿನಲ್ಲಿ ಬೆಳೆದಿದ್ದ ಆರು ತೆಂಗಿನ ಸಸಿಗಳನ್ನು ಮುರಿದು ಹಾಕಿವೆ.

ಸಂತೆಮೊಗಳ್ಳಿ ಗ್ರಾಮದ ರೈತ ರಾಘವೇಂದ್ರ ಅವರ ಒಂದೂವರೆ ಎಕರೆ ಜಾಗದಲ್ಲಿ ಬೆಳೆದಿದ್ದ ಟೊಮೆಟೊ ಬೆಳೆಗೆ ನುಗ್ಗಿ ಹಾಳು ಮಾಡಿವೆ.

ತೆಂಗಿನಕಲ್ಲು ಅರಣ್ಯ ಪ್ರದೇಶದಿಂದ ಬಂದಿರುವ ಕಾಡಾನೆಗಳು ಈ ಭಾಗದ ಬೆಟ್ಟಗುಡ್ಡೆಗಳಲ್ಲಿ ಬೀಡುಬಿಟ್ಟು ರಾತ್ರಿ ವೇಳೆ ರೈತರ ಬೆಳೆಗಳ ಮೇಲೆ ದಾಳಿ ಮಾಡುತ್ತಿವೆ.ಅರಣ್ಯ ಇಲಾಖೆ ಅಧಿಕಾರಿಗಳು ಕಾಡಾನೆಗಳನ್ನು ಕಾಡಿಗೆ ಅಟ್ಟಲು ಕ್ರಮ ಕೈಗೊಳ್ಳಬೇಕು ಎಂದು ರೈತರು ಒತ್ತಾಯಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT