ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ: ಸೃಜನಶೀಲತೆ ಮೈಗೂಡಿಸಿಕೊಳ್ಳಿ

Published 17 ಮೇ 2024, 6:19 IST
Last Updated 17 ಮೇ 2024, 6:19 IST
ಅಕ್ಷರ ಗಾತ್ರ

ಚನ್ನಪಟ್ಟಣ: ‘ವಿದ್ಯಾರ್ಥಿಗಳು ತಮ್ಮ ಶಿಕ್ಷಣದ ಜೊತೆಗೆ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗಿಯಾಗುವುದರ ಮೂಲಕ ಸೃಜನಶೀಲತೆಯನ್ನು ಮೈಗೂಡಿಸಿಕೊಳ್ಳಬೇಕು’ ಎಂದು ಕನ್ನಡ ಸಾಹಿತ್ಯ ಪರಿಷತ್ ರಾಮನಗರ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಟಿ. ನಾಗೇಶ್ ಕಿವಿಮಾತು ಹೇಳಿದರು.

ನಗರದ ಜ್ಞಾನಸರೋವರ ಪ್ರಥಮ ದರ್ಜೆ ಕಾಲೇಜಿನಲ್ಲಿ ಕಾಲೇಜಿನ ಸಾಂಸ್ಕೃತಿಕ ಘಟಕದ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಆಹಾರ ಹಬ್ಬ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

‘ವಿದ್ಯಾರ್ಥಿಗಳು ಆಲಸ್ಯ ಮನೋಭಾವನೆಯನ್ನು ತೊರೆದು ಕ್ರಿಯಾಶೀಲರಾಗಿರಬೇಕು. ವಿದ್ಯಾರ್ಥಿಗಳು ಆಹಾರದ ಮಹತ್ವ ತಿಳಿಯುವುದರ ಜೊತೆಗೆ ಆರೋಗ್ಯಕ್ಕಾಗಿ ಆಹಾರ ಎಂಬುದನ್ನು ಅರಿತುಕೊಳ್ಳಬೇಕು’ ಎಂದರು.

ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಬಿ.ಎಸ್. ಹೇಮಲತಾ ಮಾತನಾಡಿ, ಪ್ರತಿವರ್ಷವೂ ನಮ್ಮ ಸಂಸ್ಥೆಯು ಪದವಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಪ್ರಗತಿಗೆ ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳನ್ನು ಹಮ್ಮಿಕೊಳ್ಳುತ್ತಿದೆ. ವಿದ್ಯಾರ್ಥಿಗಳಿಗೆ ಅಗತ್ಯವಾಗಿರುವ ಕೌಶಲಗಳನ್ನು ವೃದ್ಧಿ ಪಡಿಸುವ ಹಲವು ವೈವಿಧ್ಯ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ ಎಂದು ತಿಳಿಸಿದರು.

ವಿದ್ಯಾಸಂಸ್ಥೆಯ ಕಾರ್ಯದರ್ಶಿ ಆರ್. ಆದರ್ಶಕುಮಾರ್, ಉಪನ್ಯಾಸಕರಾದ ಎಚ್.ಸಿ. ಹೊಳಸಾಲಯ್ಯ, ಎಂ.ಆರ್. ಪ್ರವೀಣ್, ಚನ್ನಂಕೇಗೌಡ, ವಿ.ವಿನಯ್ ಕುಮಾರ್, ಜಾಕೀರ್ ಹುಸೇನ್, ಕೆ.ಶ್ರುತಿ, ಭಾವನಾ, ಪಿ.ಎಸ್. ಚಂದನಾ, ಸಿಬ್ಬಂದಿಗಳಾದ ರೂಪಾ, ಅಭಿಲಾಷ್ ಕುಮಾರ್, ಸುಂದ್ರಮ್ಮ ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT