ಮಂಗಳವಾರ, 16 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಚನ್ನಪಟ್ಟಣ | ಚಿಕ್ಕಮಣ್ಣುಗುಡ್ಡೆ ಅರಣ್ಯಪ್ರದೇಶದಲ್ಲಿ ಅಕ್ರಮ ಕಟ್ಟಡ: ದೂರು ದಾಖಲು

Published 21 ಜೂನ್ 2024, 16:09 IST
Last Updated 21 ಜೂನ್ 2024, 16:09 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಚಿಕ್ಕಮಣ್ಣುಗುಡ್ಡೆ ಅರಣ್ಯ ಪ್ರದೇಶದಲ್ಲಿ ಅಕ್ರಮ ಕಟ್ಟಡವೊಂದು ನಿರ್ಮಾಣವಾಗುತ್ತಿದ್ದು, ಈ ಬಗ್ಗೆ ಪರಿಶೀಲನೆ ನಡೆಸಿ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಸಾಮಾಜಿಕ ಕಾರ್ಯಕರ್ತ ಕಂಚನಹಳ್ಳಿ ರವಿಕುಮಾರ್ ರಾಮನಗರ ಜಿಲ್ಲಾ ಉಪ ಅರಣ್ಯ ಸಂರಕ್ಷಣಾಧಿಕಾರಿಗೆ ಶುಕ್ರವಾರ ದೂರು ನೀಡಿದ್ದಾರೆ.

ಚಿಕ್ಕಮಣ್ಣುಗುಡ್ಡೆ ಅರಣ್ಯಪ್ರದೇಶದಲ್ಲಿ ಕೆಂಗಲ್ ಹಾಗೂ ದೇವರದೊಡ್ಡಿ ರಸ್ತೆಗೆ ಹೊಂದಿಕೊಂಡಂತೆ ಸುಮಾರು ಎರಡು ತಿಂಗಳಿನಿಂದ ಹೋಟೆಲ್ ಅಥವಾ ಬಾರ್ ಅನ್ನು ಹೋಲುವ ರೀತಿಯಲ್ಲಿ ಕಟ್ಟಡವೊಂದು ನಿರ್ಮಾಣವಾಗುತ್ತಿದೆ. ಇದರಲ್ಲಿ ಸ್ಥಳೀಯ ಅರಣ್ಯ ಇಲಾಖೆ ಅಧಿಕಾರಿಗಳು ಶಾಮೀಲಾಗಿದ್ದಾರೆ ಎಂದು ಅವರು ಪತ್ರದಲ್ಲಿ ಆರೋಪಿಸಿದ್ದಾರೆ.

ಇಲಾಖೆ ಪ್ರತಿಕ್ರಿಯೆ: 'ಅರಣ್ಯ ಜಾಗದಲ್ಲಿ ವ್ಯಕ್ತಿಯೊಬ್ಬರು ಕಟ್ಟಡ ಕಟ್ಟುತ್ತಿರುವ ವಿಷಯ ಗೊತ್ತಾದ ತಕ್ಷಣ ಜಾಗಕ್ಕೆ ಭೇಟಿ ನೀಡಿ ಕಟ್ಟಡ ನಿರ್ಮಾಣವನ್ನು ತಡೆಯಲಾಗಿದೆ. ಆದರೆ ಆ ವ್ಯಕ್ತಿಯು ಜಾಗ ತಮಗೆ ಸೇರಿದ್ದು ಎಂದು ತಿಳಿಸಿ ಸ್ಥಳಕ್ಕೆ ಸಂಬಂಧಪಟ್ಟಂತೆ ಪಹಣಿಯನ್ನು ನೀಡಿರುತ್ತಾರೆ. ಆದರೆ ಜಾಗಕ್ಕೆ ಸಂಬಂಧಪಟ್ಟ ಮೂಲ ದಾಖಲೆಗಳನ್ನು ಇಲಾಖೆಗೆ ಹಾಜರುಪಡಿಸುವಂತೆ ಸೂಚಿಸಲಾಗಿದೆ. ಆ ವ್ಯಕಿಯು ಸೂಕ್ತ ದಾಖಲೆಗಳನ್ನು ನೀಡದಿದ್ದರೆ ಕ್ರಮ ತೆಗೆದುಕೊಳ್ಳಲಾಗುವುದು’ ಎಂದು ಚನ್ನಪಟ್ಟಣ ವಲಯ ಅರಣ್ಯಾಧಿಕಾರಿ ಕಿರಣ್ ಪ್ರತಿಕ್ರಿಯಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT