ಭಾನುವಾರ, 21 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯಂತ್ರಕ್ಕೆ ಸಿಲುಕಿ ಕಾರ್ಮಿಕ ಸಾವು

Published 7 ಮಾರ್ಚ್ 2024, 6:25 IST
Last Updated 7 ಮಾರ್ಚ್ 2024, 6:25 IST
ಅಕ್ಷರ ಗಾತ್ರ

ಚನ್ನಪಟ್ಟಣ: ತಾಲ್ಲೂಕಿನ ಅಕ್ಕೂರು ಗ್ರಾಮದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಕೆಲಸ ನಿರ್ವಹಿಸುತ್ತಿದ್ದ ಕಾರ್ಮಿಕನೊಬ್ಬ ಬುಧವಾರ ಕಬ್ಬಿಣವನ್ನು ಕಟ್ಟಿಂಗ್ ಮಾಡುವ ಯಂತ್ರಕ್ಕೆ ಆಕಸ್ಮಿಕವಾಗಿ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ರವಿ (35) ಮೃತಪಟ್ಟ ಕಾರ್ಮಿಕ. ಚನ್ನಪಟ್ಟಣದ ಕನಕನಗರ ವಾಸಿಯಾಗಿದ್ದ ರವಿ ಕತ್ತರಿಸಿದ ಕಬ್ಬಿಣಗಳ ತುಂಡುಗಳನ್ನು ಕಟ್ಟಡದ ಮೇಲ್ಭಾಗಕ್ಕೆ ಸಾಗಿಸುವ ಕೆಲಸ ಮಾಡುತ್ತಿದ್ದರು. ಈ ವೇಳೆ ಆಕಸ್ಮಿಕವಾಗಿ ಕಾಲುಜಾರಿ ಕಟಿಂಗ್ ಯಂತ್ರದ ಮೇಲೆ ಬಿದ್ದಿದ್ದಾರೆ. ರವಿ ಅವರ ಕತ್ತು ಯಂತ್ರಕ್ಕೆ ಸಿಲುಕಿ ತೀವ್ರ ರಕ್ತಸ್ರಾವವಾಗಿ ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳದಲ್ಲಿದ್ದ ಕಾರ್ಮಿಕರು ತಿಳಿಸಿದ್ದಾರೆ.

ವಿಷಯ ತಿಳಿದು ಅಕ್ಕೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸ್ಥಳಕ್ಕೆ ಬೆರಳಚ್ಚು ತಜ್ಞರು ಭೇಟಿ ನೀಡಿ ಪರೀಕ್ಷೆ ನಡೆಸಿದರು. ಅಕ್ಕೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT