ಚನ್ನಪಟ್ಟಣ: ‘ಪ್ರತಿಯೊಬ್ಬ ವಿದ್ಯಾರ್ಥಿಗಳಿಗೂ ಗುರು ಹಾಗೂ ಗುರಿ ಇರಬೇಕು. ಆಗ ಮಾತ್ರ ಯಶಸ್ಸು ಸಾಧಿಸಲು ಸಾಧ್ಯ’ ಎಂದು ಮೈಸೂರು ವಿಶ್ವವಿದ್ಯಾಲಯದ ನಿವೃತ್ತ ಪ್ರಾಧ್ಯಾಪಕ ಪ್ರಧಾನ್ ಗುರುದತ್ತ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಪ್ರಥಮ ಕಾಲೇಜಿನಲ್ಲಿ ಮಂಗಳವಾರ ನಡೆದ 2023-24ನೇ ಸಾಲಿನ ಕ್ರೀಡಾ ಹಾಗೂ ಸಾಂಸ್ಕೃತಿಕ ಚಟುವಟಿಕೆ, ರಾಷ್ಟ್ರೀಯ ಸೇವಾ ಯೋಜನೆ, ಎನ್ಸಿಸಿ, ರೆಡ್ ಕ್ರಾಸ್ ರೋವರ್ಸ್ ಅಂಡ್ ರೇಂಜರ್ಸ್ ಹಾಗೂ ಇತರೆ ಸಮಿತಿಯ ಚಟುವಟಿಕೆಗಳ ಸಮರೋಪ ಸಮಾರಂಭ ಉದ್ಘಾಟಿಸಿ ಮಾತನಾಡಿದರು.

ವಿದ್ಯಾರ್ಥಿಗಳು ಶಿಕ್ಷಣ ಕ್ಷೇತ್ರಕ್ಕೆ ಮಾತ್ರ ಸೀಮಿತವಾಗಬಾರದು. ಕ್ರೀಡಾ, ಸಾಂಸ್ಕೃತಿಕ ಹಾಗೂ ಇತರೆ ಕ್ಷೇತ್ರಗಳಲ್ಲಿಯೂ ಗುರುತಿಸಿಕೊಳ್ಳಬೇಕು. ರಾಜ್ಯ ಹಾಗೂ ರಾಷ್ಟ್ರೀಯಮಟ್ಟದಲ್ಲಿ ಗುರುತಿಸಿಕೊಳ್ಳಲು ಬೇಕಾದ ಸಿದ್ಧತೆಗಳನ್ನು ನಡೆಸಬೇಕು. ಇದಕ್ಕೆ ಅಧ್ಯಾಪಕ ವರ್ಗದ ಸಹಕಾರ ಹಾಗೂ ಪ್ರೋತ್ಸಾಹ ನೀಡಬೇಕು ಎಂದರು.

ಪ್ರಾಂಶುಪಾಲೆ ಉಷಾಮಾಲಿನಿ ಅಧ್ಯಕ್ಷತೆ ವಹಿಸಿದ್ದರು. ಕಾರ್ಯಕ್ರಮದಲ್ಲಿ ಶಿಕ್ಷಣ, ಕ್ರೀಡೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ಸಹಾಯಕ ಪ್ರಾಧ್ಯಾಪಕಿ ಡಾ. ಚನ್ನಮ್ಮ ಕಾಲೇಜಿನ ವರದಿ ಮಂಡಿಸಿದರು.

ಕಾಲೇಜಿನ ಸಾಂಸ್ಕೃತಿಕ ಸಮಿತಿಯ ಸಂಚಾಲಕ ಜಗದೀಶ್ ನಡವಿನಮಠ, ಸಹಾಯಕ ಪ್ರಾಧ್ಯಾಪಕರಾದ ವೀಣಾ, ಮುಜಾಹಿದ್ ಖಾನ್, ರವಿವರ್ಮ, ಅನಿತಾ ರಾವ್, ಅನುಪಮ, ಆನಂದ್, ಅನುರಾಧ, ವಾಣಿ, ಶ್ರೀಕಾಂತ್, ಬೋರೇಗೌಡ, ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.