ಚನ್ನಪಟ್ಟಣ: ತಾಲ್ಲೂಕಿನ ಕುಕ್ಕೂರಿನಲ್ಲಿ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೃದ್ಧೆಯ ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿರುವ ಇಲ್ಲಿನ ಗ್ರಾಮಾಂತರ ಪೊಲೀಸರು, ಬಂಧಿತರಿಂದ ಸುಮಾರು ₹7.75 ಲಕ್ಷ ಮೌಲ್ಯದ ಚಿನ್ನಾಭರಣ ಹಾಗೂ ಕೃತ್ಯಕ್ಕೆ ಬಳಸಿದ್ದ ದ್ವಿಚಕ್ರ ವಾಹನವನ್ನು ವಶ ಪಡಿಸಿಕೊಂಡಿದ್ದಾರೆ.

ಕನಕಪುರ ತಾಲ್ಲೂಕಿನ ಕೆಬ್ಬಳ್ಳಿಯ ಕೆ.ಸಿ. ಶಿವರಾಜು (40), ಚೀರನಕುಪ್ಪೆಯ ಮಂಜುನಾಥ (35) ಬಂಧಿತರು. ಏಪ್ರಿಲ್ 4 ರಂದು ಕುಕ್ಕೂರು ಗ್ರಾಮದ ವೃದ್ದೆ ನಿಂಗಮ್ಮ ಅವರು ತಮ್ಮ ಅಂಗಡಿಯಲ್ಲಿ ವ್ಯಾಪಾರ ಮಾಡುತ್ತಿದ್ದ ವೇಳೆ ಬೈಕ್ನಲ್ಲಿ ಬಂದಿದದ ಆರೋಪಿಗಳು ನೀರಿನ ಬಾಟೆಲ್ ಖರೀದಿಸುವ ನೆಪದಲ್ಲಿ ವೃದ್ದೆಯ ಕುತ್ತಿಗೆಯಲ್ಲಿದ್ದ 63 ಗ್ರಾಂ ಚಿನ್ನದ ಸರವನ್ನು ಕಿತ್ತು ಪರಾರಿಯಾಗಿದ್ದರು. ಈ ಕುರಿತು ಇಲ್ಲಿನ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಈ ಬಗ್ಗೆ ತನಿಖೆ ನಡೆಸಿದ ಪೊಲೀಸರು ಸೂಕ್ತ ಮಾಹಿತಿ ಕಲೆಹಾಕಿ, ಸರಗಳ್ಳತನ ಮಾಡಿದ್ದ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. ಸುಲಿಗೆ ಮಾಡಲಾಗಿದ್ದ ಸುಮಾರು ₹7,75 ಲಕ್ಷ ಮೌಲ್ಯದ 63 ಗ್ರಾಂ ಚಿನ್ನದ ಸರ ಹಾಗೂ ಕೃತ್ಯಕ್ಕೆ ಬಳಕೆ ಮಾಡಿದ್ದ ಒಂದು ದ್ವಿಚಕ್ರ ವಾಹನವನ್ನು ವಶಪಡಿಸಿಕೊಂಡಿದ್ದಾರೆ.

ಆರೋಪಿಗಳು ವಿರುದ್ಧ ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ಹಾಗೂ ಗುಬ್ಬಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಕಳ್ಳತನ ಸೇರಿ ಒಟ್ಟು ಮೂರು ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಗ್ರಾಮಾಂತರ ಠಾಣೆ ಸರ್ಕಲ್ ಇನ್ಸ್ಪೆಕ್ಟರ್ ಬಿ.ಕೆ. ಪ್ರಕಾಶ್, ಸಬ್ಇನ್ ಸ್ಪೆಕ್ಟರ್ ಮನೋಹರ್, ಸಿಬ್ಬಂದಿ ಶಿವಕುಮಾರ್, ಹನುಮಂತಶೆಟ್ಟಿ, ಚೇತನ್, ಪವನ್ ಕುಮಾರ್, ಶಿವು, ನಂದೀಶ್, ಮಹದೇವ್, ಜೀಪ್ ಚಾಲಕ ಪ್ರಕಾಶ್ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260523-18-1062106703

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.