ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚುನಾವಣಾ ನೀತಿ ಸಂಹಿತೆ ಪಾಲಿಸಿ

Published 21 ಮಾರ್ಚ್ 2024, 4:21 IST
Last Updated 21 ಮಾರ್ಚ್ 2024, 4:21 IST
ಅಕ್ಷರ ಗಾತ್ರ

ಚನ್ನಪಟ್ಟಣ: ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ತಾಲ್ಲೂಕಿನಲ್ಲಿ ಮಾದರಿ ಚುನಾವಣಾ ನೀತಿ ಸಂಹಿತೆ ಜಾರಿಯಲ್ಲಿದ್ದು, ಸಾರ್ವಜನಿಕರು ಚುನಾವಣಾ ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದು ಸಹಾಯಕ ಚುನಾವಣಾಧಿಕಾರಿ, ಜಿಲ್ಲಾ ವಿಶೇಷ ಭೂಸ್ವಾಧೀನಾಧಿಕಾರಿ ವಿ.ಆರ್.ವಿಶ್ವನಾಥ್ ಮನವಿ ಮಾಡಿದರು.

ತಾಲ್ಲೂಕು ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಮಾದರಿ ಚುನಾವಣಾ ನೀತಿ ಸಂಹಿತೆ ಪರಿಶೀಲನೆ ನಡೆಸಲು 22 ಸೆಕ್ಟರ್ ಅಧಿಕಾರಿಗಳು, 9 ಎಫ್‌ಎಸ್‌ಟಿ ತಂಡಗಳು, 4 ಚೆಕ್ ಪೋಸ್ಟ್‌ಗಳಲ್ಲಿ 12 ತಂಡಗಳು, 3 ವಿಎಸ್‌ಟಿ ತಂಡ, 2 ವಿವಿಟಿ ತಂಡಗಳನ್ನು ನಿಯೋಜಿಸಲಾಗಿದೆ ಎಂದು ತಿಳಿಸಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 1,10,422 ಪುರುಷರು, 1,18,338 ಮಹಿಳೆಯರು ಸೇರಿ ಒಟ್ಟು 2,28,768 ಮಂದಿ ಮತದಾರರಿದ್ದಾರೆ. ನಗರ ಪ್ರದೇಶದಲ್ಲಿ 59 ಮತಗಟ್ಟೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ 212 ಮತಗಟ್ಟೆ ಸೇರಿ 271 ಮತಗಟ್ಟೆಗಳು ಒಳಪಟ್ಟಿವೆ ಎಂದು ತಿಳಿಸಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಗೆ ನೋಡೆಲ್ ಅಧಿಕಾರಿಗಳನ್ನಾಗಿ ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಕೆ.ಮನು, ನಗರಸಭಾ ಪೌರಾಯುಕ್ತ ಪುಟ್ಟಸ್ವಾಮಿ, ಪೊಲೀಸ್ ನೋಡೆಲ್ ಅಧಿಕಾರಿಯಾಗಿ ಸಬ್ ಇನ್‌ಸ್ಪೆಕ್ಟರ್‌ ಮುತ್ತುರಾಜು, ಅಬಕಾರಿ ನೋಡೆಲ್ ಅಧಿಕಾರಿಯಾಗಿ ಅಬಕಾರಿ ಇನ್‌ಸ್ಪೆಕ್ಟರ್‌ ಉಮೇಶ್ ಅವರನ್ನು ನೇಮಿಸಲಾಗಿದೆ ಎಂದು ಅವರು ತಿಳಿಸಿದರು.

ತಾಲ್ಲೂಕಿನಲ್ಲಿ ಯಾವುದೇ ಸಭೆ ಸಮಾರಂಭ ಮಾಡಲು ತಾಲ್ಲೂಕು ಕಚೇರಿಯಿಂದ ಅನುಮತಿ ಪಡೆಯಬೇಕು. ಈ ಬಗ್ಗೆ ತಾಲ್ಲೂಕು ಕಚೇರಿಯಲ್ಲಿ ಕೌಂಟರ್ ತೆರೆಯಲಾಗಿದೆ ಎಂದು ಅವರು ತಿಳಿಸಿದರು.

ತಹಶೀಲ್ದಾರ್ ಟಿ.ಎನ್. ನರಸಿಂಹಮೂರ್ತಿ, ಪೌರಾಯುಕ್ತ ಪುಟ್ಟಸ್ವಾಮಿ, ತಾಲ್ಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಮನು, ಪೊಲೀಸ್ ಇಲಾಖೆ ಅಧಿಕಾರಿಗಳು ಹಾಜರಿದ್ದರು.

ನಾಲ್ಕು ಚೆಕ್ ಪೋಸ್ಟ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಾಲ್ಕು ಚೆಕ್ ಪೋಸ್ಟ್ ಗಳನ್ನು ಸ್ಥಾಪಿಸಲಾಗಿದೆ ಎಂದು ಸಹಾಯಕ ಚುನಾವಣಾಧಿಕಾರಿ ವಿ.ಆರ್.ವಿಶ್ವನಾಥ್ ತಿಳಿಸಿದರು. ಮಳೂರು ಹೋಬಳಿಯಲ್ಲಿ ಕೋಲೂರು ಮಾಕಳಿ ಕುಂಬಾರಕಟ್ಟೆ ಬಳಿ ವಿರುಪಾಕ್ಷಿಪುರ ಹೋಬಳಿಯಲ್ಲಿ ಜಗದಾಪುರ ಬಳಿ ಚೆಕ್ ಪೋಸ್ಟ್ ಸ್ಥಾಪಿಸಲಾಗಿದೆ. ನಾಲ್ಕು ಚೆಕ್ ಪೋಸ್ಟ್ ಗಳಲ್ಲಿ ಚುನಾವಣಾ ಸಿಬ್ಬಂದಿ ಪೊಲೀಸ್ ಇಲಾಖೆ ಅಬಕಾರಿ ಇಲಾಖೆ ಅಧಿಕಾರಿಗಳನ್ನು ಮತ್ತು ವೀಡಿಯೋ ಗ್ರಾಫರ್ ಗಳನ್ನು ನಿಯೋಜಿಸಲಾಗಿರುತ್ತದೆ ಎಂದು ತಿಳಿಸಿದರು. ತಾಲ್ಲೂಕು ಕಚೇರಿಯಲ್ಲಿ ಕಂಟ್ರೋಲ್ ರೂಂ ಸ್ಥಾಪಿಸಲಾಗಿದೆ. ದೂ.ಸಂ.: 080 27251765 ದಿನದ 24*7 ಕಾರ್ಯನಿರ್ವಹಿಸಲಿದೆ. ಸಾರ್ವಜನಿಕರು ಚುನಾವಣಾ ಸಂಬಂಧ ದೂರು ದಾಖಲಿಸಬಹುದು. ಜೊತೆಗೆ ಸಿ ವಿಜಿಲ್ ಆಪ್ ಮುಖಾಂತರವೂ ದೂರು ದಾಖಲಿಸಬಹುದು ಎಂದು ಅವರು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT