ಚನ್ನಪಟ್ಟಣ: ತಾಲ್ಲೂಕಿನ ಸುಣ್ಣಘಟ್ಟ ಕೆರೆಯಲ್ಲಿ ಬೀಡುಬಿಟ್ಟಿದ್ದ ಮೂರು ಕಾಡಾನೆಗಳನ್ನು ಶನಿವಾರ ರಾತ್ರಿ ಕಾಡಿಗಟ್ಟುವ ಕಾರ್ಯಾಚರಣೆ ವೇಳೆ ಸಲಗವೊಂದು ರೈತನ ಮೇಲೆ ದಾಳಿ ನಡೆಸಿದೆ.

ಕಾಡಾನೆ ದಾಳಿಯಲ್ಲಿ ಮಂಗಾಡಹಳ್ಳಿಯ ರೈತ ಕಾಂತರಾಜು(55) ಗಂಭೀರವಾಗಿ ಗಾಯಗೊಂಡಿದ್ದಾರೆ.

ಜಮೀನಿಗೆ ರಾತ್ರಿ ನೀರು ಹಾಯಿಸಲು ಹೋಗಿದ್ದ ವೇಳೆ ಅರಣ್ಯ ಸಿಬ್ಬಂದಿ ಅಟ್ಟಿಸಿಕೊಂಡು ಬಂದ ಕಾಡಾನೆಗಳ ಪೈಕಿ ಸಲಗವೊಂದು ಕಾಂತರಾಜು ಮೇಲೆ ದಾಳಿ ನಡೆಸಿದೆ. ದಂತದಿಂದ ಹೊಟ್ಟೆಗೆ ಚುಚ್ಚಿರುವುದರಿಂದ ರೈತ ಗಂಭೀರವಾಗಿ ಗಾಯಗೊಂಡಿದ್ದಾರೆ. ಜೊತೆಗೆ ಪೃಷ್ಟದ ಭಾಗದ ಮೂಳೆ ಮುರಿದಿದೆ.

ಅರಣ್ಯ ಇಲಾಖೆ ಅಧಿಕಾರಿಗಳು ತಕ್ಷಣ ಅವರನ್ನು ನಗರದ ಸಾರ್ವಜನಿಕ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರು. ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ. ಶಸ್ತ್ರಚಿಕಿತ್ಸೆ ಮಾಡಬೇಕು ಎಂದು ವೈದ್ಯರು ತಿಳಿಸಿದ್ದಾರೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260421-14-2006308588

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.