ಚನ್ನಪಟ್ಟಣ: ಆಟ–ಪಾಠದಲ್ಲಿ ತೊಡಗಿಕೊಂಡು ಸುಂದರ ಕನಸು ಕಾಣುವ ಮುಗ್ಧ ಮಕ್ಕಳನ್ನು ಕೆಲಸಕ್ಕೆ ದೂಡುವುದು ಅಪರಾಧ ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಮರೀಗೌಡ ಅಭಿಪ್ರಾಯಪಟ್ಟರು.

ನಗರದ ಬಾಲು ಪಬ್ಲಿಕ್ ಶಾಲೆಯಲ್ಲಿ ತಾಲ್ಲೂಕು ಕಾನೂನು ಸೇವಾ ಸಮಿತಿ, ತಾಲ್ಲೂಕು ವಕೀಲರ ಸಂಘ, ಬಾಲು ಪಬ್ಲಿಕ್ ಶಾಲೆ, ಬಾಲು ಆಸ್ಪತ್ರೆ ಆಶ್ರಯದಲ್ಲಿ ಶುಕ್ರವಾರ ಏರ್ಪಡಿಸಿದ್ದ ಕಾನೂನು ಅರಿವು, ಜೀತ ಪದ್ಧತಿ ನಿರ್ಮೂಲನಾ ದಿನಾಚರಣೆಗೆ ಚಾಲನೆ ನೀಡಿ ಮಾತನಾಡಿದರು.

ಮಕ್ಕಳನ್ನು ಕೆಲಸಕ್ಕೆ ಸೇರಿಸುವುದು ಹಾಗೂ ದುಡಿಸಿಕೊಳ್ಳುವುದು ಎರಡೂ ಕೂಡ ಅಪರಾಧ. ಇದನ್ನು ಪೋಷಕರು ಹಾಗೂ ದುಡಿಸಿಕೊಳ್ಳುವವರು ಅರಿತುಕೊಳ್ಳಬೇಕು. ಕಾರ್ಮಿಕರಾಗಿ ದುಡಿಯುತ್ತಿರುವ ಮಕ್ಕಳನ್ನು ಮತ್ತೆ ಶಾಲೆಗೆ ದಾಖಲಿಸಿಕೊಳ್ಳಲು ಯೋಜನೆ ಜಾರಿಗೆ ತರಲಾಗಿದೆ. ಇದನ್ನು ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾನೂನು ಸೇವಾ ಸಮಿತಿ ಕಾರ್ಯದರ್ಶಿ ಸುನೀಲ್ ರಾಜ್ ಅರಸ್ ಮಾತನಾಡಿ, ಜೀತಪದ್ಧತಿ ದೊಡ್ಡ ಪಿಡುಗು. ಕಾರ್ಖಾನೆ, ಹೋಟೆಲ್‌ಗಳಲ್ಲಿ ಬಾಲ ಕಾರ್ಮಿಕರಾಗಿ ದುಡಿಯುತ್ತಿರುವವರು ಕಂಡು ಬಂದರೆ ಪೊಲೀಸರಿಗೆ ಅಥವಾ ಕಾರ್ಮಿಕ ಇಲಾಖೆಗೆ ತಿಳಿಸಬೇಕು ಎಂದರು.

ಅಧ್ಯಕ್ಷತೆ ವಹಿಸಿದ್ದ ವಿದ್ಯಾಸಂಸ್ಥೆ ಜಂಟಿ ಕಾರ್ಯದರ್ಶಿ ವಿ.ಬಾಲಸುಬ್ರಮಣ್ಯಂ ಮಾತನಾಡಿ, ಸಮಾಜದಲ್ಲಿ ನಡೆಯುವ ಅಪರಾಧ ತಡೆಯಲು ಮಕ್ಕಳು ಪೊಲೀಸ್ ಇಲಾಖೆಗೆ ಸಹಕಾರ ನೀಡಬೇಕು ಎಂದರು.

ವಿದ್ಯಾಸಂಸ್ಥೆ ಕಾರ್ಯದರ್ಶಿ ವಿ.ವೆಂಕಟಸುಬ್ಬಯ್ಯ ಚೆಟ್ಟಿ, ಶಾಲೆ ಪ್ರಾಂಶುಪಾಲರಾದ ಕವಿತಾ, ಶಿಕ್ಷಕರು, ಕಾನೂನು ಸೇವಾ ಸಮಿತಿ ಪದಾಧಿಕಾರಿಗಳು, ವಕೀಲರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.