ಚನ್ನಪಟ್ಟಣ: ರಾಜಕೀಯ ಅಸ್ತಿತ್ವ ಹುಡುಕುತ್ತಿರುವ ನಿಖಿಲ್ ಕುಮಾರಸ್ವಾಮಿ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಬಗ್ಗೆ ಏಕವಚನದಲ್ಲಿ ಮಾತನಾಡುವ ಮೂಲಕ ದೊಡ್ಡನಾಯಕ ಎಂಬ ಭ್ರಮೆಯಲ್ಲಿ ಇರುವುದು ಖಂಡನೀಯ ಎಂದು ಕಾಂಗ್ರೆಸ್ ಮುಖಂಡ ಪಿ.ಡಿ.ರಾಜು ಆಕ್ರೋಶ ವ್ಯಕ್ತಪಡಿಸಿದರು.

ಪತ್ರಿಕಾ ಹೇಳಿಕೆ ನೀಡಿರುವ ಅವರು, ‘ಹ್ಯಾಟ್ರಿಕ್ ಸೋಲಿನಿಂದ ಕಂಗೆಟ್ಟಿರುವ ನಿಖಿಲ್ ಅವರು ಭ್ರಮೆಯಲ್ಲಿದ್ದಾರೆ. ಅದೇ ಭ್ರಮೆಯಲ್ಲೇ ನಾನು ದೊಡ್ಡ ನಾಯಕ ಎಂದುಕೊಂಡಿದ್ದಾರೆ. ಆದರೆ, ರಾಜ್ಯದ ಜನರು ಇವರಿಗೆ ನಾಯಕನಾಗಲು ಇನ್ನೂ ಮುದ್ರೆ ಒತ್ತಿಲ್ಲ ಎನ್ನುವುದನ್ನು ಮರೆಯಬಾರದು’ಎಂದು ಟೀಕಿಸಿದರು.

‘ಡಿ.ಕೆ.ಶಿವಕುಮಾರ್ ಪಕ್ಷದ ಹಿರಿಯ ರಾಜಕಾರಣಿ. ಹಲವು ಹುದ್ದೆ ನಿಭಾಯಿಸಿದವರು. ಅಂತಹವರ ಬಗ್ಗೆ ಮಾತನಾಡುವ ಮುನ್ನ ಹತ್ತಾರು ಬಾರಿ ಯೋಚಿಸಿ. ಇಲ್ಲವೇ ಜನರ ಮುಂದೆ ನೀವು ನಗೆಪಾಟಲಿಗೆ ಗುರಿಯಾಗುತ್ತೀರಿ’ ಎಂದು ಎಚ್ಚರಿಸಿದರು

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260525-14-1543893092

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.