ಚನ್ನಪಟ್ಟಣ: ತಾಲ್ಲೂಕಿನ ಮಳೂರುಮಟ್ಟಣ ಗ್ರಾಮದ ವಿದ್ಯಾರ್ಥಿನಿ ಎಂ.ವಿ. ನಿತ್ಯಶ್ರೀ ಅವರು ಜಿಕೆವಿಕೆಯ ಬಿ.ಟೆಕ್. ಕೃಷಿ ಎಂಜಿನಿಯರಿಂಗ್ ಪದವಿ ಪರೀಕ್ಷೆಯಲ್ಲಿ ಮೂರು ಚಿನ್ನದ ಪದಕ ಪಡೆದಿದ್ದಾರೆ.

ಗ್ರಾಮದ ಕೃಷಿಕ ಕುಟುಂಬದ ಪ್ರತಿಭಾ– ವೀರಭದ್ರೇಗೌಡ ದಂಪತಿ ಪುತ್ರಿ ನಿತ್ಯಶ್ರೀ ಅವರು ಡಾ.ಎಸ್. ಜವರೇಗೌಡ ಚಿನ್ನದ ಪದಕ, ಸರ್ ಎಂ. ವಿಶ್ವೇಶ್ವರಯ್ಯ ಚಿನ್ನದ ಪದಕ, ಕೃಷಿ ವಿಶ್ವವಿದ್ಯಾಲಯದ ಚಿನ್ನದ ಪದಕಗಳನ್ನು ಪಡೆದಿದ್ದಾರೆ.

ಇತ್ತೀಚೆಗೆ ಕೃಷಿ ವಿಶ್ವವಿದ್ಯಾಲಯದ ಆವರಣದಲ್ಲಿ ನಡೆದ 60ನೇ ಘಟಿಕೋತ್ಸವದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹಲೋಥ್ ಅವರಿಂದ ಚಿನ್ನದ ಪದಕಗಳನ್ನು ಸ್ವೀಕರಿಸಿದರು. ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಉಪಸ್ಥಿತರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260517-14-746245240

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.