ಚನ್ನಪಟ್ಟಣ: ನಗರದ ಶತಮಾನೋತ್ಸವ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಕೃಷಿ ಇಲಾಖೆ ವತಿಯಿಂದ ಮಂಗಳವಾರ ಜಿಲ್ಲಾ ಮಟ್ಟದ ವಾಣಿಜ್ಯ ಮೇಳ-2026 ಆಯೋಜಿಸಲಾಗಿತ್ತು.

ಕರ್ನಾಟಕ ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಎಸ್.ಗಂಗಾಧರ್ ಮಾತನಾಡಿ, ವಿಪರೀತ ರಾಸಾಯನಿಕ ಬಳಕೆಯಿಂದ ಕೃಷಿ ರೋಗಗಳಿಗೆ ಕಾರಣವಾಗುತ್ತಿದೆ. ರೈತರು ಸಾವಯವ ಕೃಷಿಗೆ ಮರಳುವುದು ಅನಿವಾರ್ಯವಾಗಿದೆ. ಇದರಿಂದ ಮುಂದಿನ ಪೀಳಿಗೆಯನ್ನು ಆರೋಗ್ಯವಂತರನ್ನಾಗಿ ಬೆಳೆಸಬಹುದು ಎಂದು ಅಭಿಪ್ರಾಯಪಟ್ಟರು.

ಸಾವಯವದೊಂದಿಗೆ ಸಿರಿಧಾನ್ಯ ಬೆಳೆಯುವ ಮೂಲಕ ಕೃಷಿಯಲ್ಲಿ ಸಾಧನೆ ಮಾಡಬಹುದು. ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಕ್ಷೇತ್ರಕ್ಕೆ ಬರಬೇಕು. ಕೃಷಿಯನ್ನು ಉದ್ಯಮವಾಗಿ ಪರಿವರ್ತಿಸಿಕೊಂಡು ವೈಜ್ಞಾನಿಕ ವಿಧಾನ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಜಿಲ್ಲೆಯಲ್ಲಿ ಹೈನುಗಾರಿಕೆ ಹಾಗೂ ರೇಷ್ಮೆ ಪ್ರಸಿದ್ಧವಾಗಿದೆ. ವಾಣಿಜ್ಯ ಬೆಳೆ ಹೆಚ್ಚಾಗಿ ಬೆಳೆಯಲಾಗುತ್ತದೆ. ಶಿಕ್ಷಿತರಿಗೆ ಉದ್ಯೋಗ ಕಷ್ಟವಾಗಿರುವ ಇಂದಿನ ಸನ್ನಿವೇಶದಲ್ಲಿ ಕೃಷಿ ಕ್ಷೇತ್ರ ಮಾತ್ರ ಎಲ್ಲರಿಗೂ ಕೆಲಸ ನೀಡುವ ಕ್ಷೇತ್ರವಾಗಿದೆ. ರೈತರಿಗೆ ಯಾವ ಬೆಳೆ ಹೆಚ್ಚು ಆದಾಯ ತರುತ್ತದೆ ಎಂಬುದನ್ನು ಅಧಿಕಾರಿಗಳು ತಿಳಿಸಿಕೊಡಬೇಕು ಎಂದು ಹೇಳಿದರು.

ಮಳವಳ್ಳಿ ಸಂಪೂರ್ಣ ಸಾವಯವ ಕೃಷಿಕರ ಸಂಘದ ಅಧ್ಯಕ್ಷ ಮಹೇಶ್ ಕುಮಾರ್, ಟಿಎಂಎಫ್ಎಂಇ ಯೋಜನೆ ಜಿಲ್ಲಾ ಸಂಪನ್ಮೂಲ ವ್ಯಕ್ತಿ ಕುಮುದಾ, ಕನಕಪುರದ ಆರ್ಗಾನಿಕ್ ಪ್ರೊಡ್ಯೂಸರ್ ಕಂಪನಿ ಸಿಇಒ ಸುಜಯ್ ಮತ್ತು ಪ್ರಮೋದ್ ಕುಮಾರ್ ಉಪನ್ಯಾಸ ನೀಡಿದರು.

ಜಿಲ್ಲೆಯಲ್ಲಿ ಅತ್ಯುತ್ತಮವಾಗಿ ಕಾರ್ಯನಿರ್ವಹಿಸಿದ ಬೆಳೆ ಸಮೀಕ್ಷೆ ಖಾಸಗಿ ನಿವಾಸಿಗಳು ಮತ್ತು ಉತ್ತಮ ಕೃಷಿ ಮಾಡುತ್ತಿರುವ ರೈತರನ್ನು ಸನ್ಮಾನಿಸಲಾಯಿತು. ಕಾರ್ಯಕ್ರಮವನ್ನು ಮಹಿಳೆಯರಿಂದ ಭತ್ತ ಕುಟ್ಟುವ ಮತ್ತು ರಾಗಿ ಬೀಸುವ ಮೂಲಕ ಉದ್ಘಾಟಿಸಿದ್ದು ಗಮನ ಸೆಳೆಯಿತು.

ವಸ್ತು ಪ್ರದರ್ಶನ ಗಮನ ಸೆಳೆಯಿತು: ಮೇಳದಲ್ಲಿ ಕೃಷಿ, ತೋಟಗಾರಿಕೆ, ರೇಷ್ಮೆ, ಮೀನುಗಾರಿಕೆ ಸೇರಿದಂತೆ ವಿವಿಧ ಇಲಾಖೆಗಳು ತಮ್ಮ ಸೌಲಭ್ಯ ಮತ್ತು ಮಾಹಿತಿಯುಳ್ಳ ಪ್ರದರ್ಶನ ಏರ್ಪಡಿಸಿದ್ದವು. ಅಲ್ಲದೆ, ರೈತರು ತಾವು ಬೆಳೆದ ಸಾವಯವ ಬೆಳೆಗಳ ಪ್ರದರ್ಶನ ಮತ್ತು ಮಾರಾಟ ಮಳಿಗೆಗಳನ್ನು ತೆರೆದಿದ್ದರು. ವಿವಿಧ ಜಿಲ್ಲೆ ಮತ್ತು ತಾಲ್ಲೂಕುಗಳ ರೈತರು ಇವುಗಳಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡರು.

ಸಮಾರೋಪ: ತಾಲ್ಲೂಕು ಸಹಾಯಕ ಕೃಷಿ ನಿರ್ದೇಶಕಿ ಅಪರ್ಣಾ ಸ್ವಾಗತಿಸಿದರು. ಸಹಾಯಕ ಕೃಷಿ ನಿರ್ದೇಶಕಿ ಶಶಿಕಲಾ ನಿರೂಪಿಸಿದರು. ಜಾರಿದಳದ ಸಹಾಯಕ ನಿರ್ದೇಶಕ ರಮೇಶ್ ವಂದಿಸಿದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260325-14-252917199

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.