ಬುಧವಾರ, ಡಿಸೆಂಬರ್ 8, 2021
26 °C

ಜಾಲಮಂಗಲ: ಚಿರತೆ ಸೆರೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ರಾಮನಗರ: ತಾಲ್ಲೂಕಿನ ಜಾಲಮಂಗಲ ಗ್ರಾಮದಲ್ಲಿ ಸೋಮವಾರ ರಾತ್ರಿ ಮೂರು ವರ್ಷದ ಗಂಡು ಚಿರತೆ ಅರಣ್ಯ ಇಲಾಖೆಯ ಬೋನಿನಲ್ಲಿ ಸೆರೆಯಾಗಿದೆ.

ಜಾಲಮಂಗಲ ಸುತ್ತಲಿನ ಗುಡ್ಡಗಳಲ್ಲಿ ಚಿರತೆಗಳು ವಾಸವಿವೆ. ಈಚೆಗೆ ಅವು ಗ್ರಾಮಕ್ಕೆ ನುಗ್ಗಿ ಸಾಕುಪ್ರಾಣಿಗಳನ್ನು ಹೊತ್ತೊಯ್ಯುವುದು ಹೆಚ್ಚಾಗಿತ್ತು. ಗ್ರಾಮದ ಆಸುಪಾಸಿನಲ್ಲಿ ಕಾಣಿಸಿಕೊಂಡಿದ್ದರಿಂದ ಜನರಲ್ಲಿ ಆತಂಕ ಹೆಚ್ಚಿತ್ತು. ಹೀಗಾಗಿ ಅವುಗಳನ್ನು ಸೆರೆ ಹಿಡಿಯುವಂತೆ ಜನರು ಮನವಿ ಮಾಡಿದ್ದು, ಅರಣ್ಯ ಇಲಾಖೆ ಸಿಬ್ಬಂದಿ ಬೋನು ಇರಿಸಿದ್ದರು. ಸೆರೆಯಾದ ಚಿರತೆಯನ್ನು ಸ್ಥಳಾಂತರಿಸಿದ್ದು, ಮಂಗಳವಾರ ಸಂಜೆ ಕಾಡಿಗೆ ಬಿಡಲಾಯಿತು.

ಕಾರ್ಯಾಚರಣೆಯಲ್ಲಿ ಎಸಿಎಫ್ ರಾಮಕೃಷ್ಣಪ್ಪ, ರಾಮನಗರ ವಲಯ ಅರಣ್ಯಾಧಿಕಾರಿ ಕಿರಣ್‌ಮಾರ್, ಉಪವಲಯ ಅರಣ್ಯ ಅಧಿಕಾರಿ ವಾಸು, ಅರಣ್ಯ ರಕ್ಷಕರಾದ ರವಿ, ಶಾಂತಕುಮಾರ್, ಮಂಜುನಾಥ್ ಪಾಲ್ಗೊಂಡರು.

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು