ಶನಿವಾರ, 12 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ವಿವಿಧ ಕಾಮಗಾರಿಗಳ ಶಂಕುಸ್ಥಾಪನೆ

Published : 19 ಸೆಪ್ಟೆಂಬರ್ 2024, 6:19 IST
Last Updated : 19 ಸೆಪ್ಟೆಂಬರ್ 2024, 6:19 IST
ಫಾಲೋ ಮಾಡಿ
Comments

ಚನ್ನಪಟ್ಟಣ: ಸೆಪ್ಟೆಂಬರ್ 20ರಿಂದ (ಶುಕ್ರವಾರದಿಂದ) ಮೂರು ದಿನಗಳ ಕಾಲ ತಾಲ್ಲೂಕಿನ ಐದು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯ ಪ್ರಮುಖ ಗ್ರಾಮಗಳಲ್ಲಿ ₹ 500 ಕೋಟಿ ಅಂದಾಜು ವೆಚ್ಚದಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ವಸತಿ ಹಾಗೂ ನಿವೇಶನಗಳ ಹಂಚಿಕೆ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಎಸ್.ಗಂಗಾಧರ್ ತಿಳಿಸಿದರು.

ನಗರದ ತಾಲ್ಲೂಕು ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಅವರು, ಸೆ.20ರಂದು ಜಿಲ್ಲಾ ಉಸ್ತುವಾರಿ ಸಚಿವ ಎಸ್.ರಾಮಲಿಂಗಾರೆಡ್ಡಿ ಅವರ ನೇತೃತ್ವದಲ್ಲಿ ತಿಟ್ಟಮಾರನಹಳ್ಳಿ ಹಾಗೂ ಅಕ್ಕೂರು ಜಿಲ್ಲಾ ಪಂಚಾಯಿತಿ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳ ಉದ್ಘಾಟನೆ, ಶಂಕುಸ್ಥಾಪನೆ, ಬಹಿರಂಗ ಸಭೆಗಳು ನಡೆಯಲಿವೆ. ಸೆ.21 ರಂದು ವಸತಿ ಸಚಿವ ಜಮೀರ್ ಅಹಮದ್ ನೇತೃತ್ವದಲ್ಲಿ ತಾಲ್ಲೂಕಿನಲ್ಲಿ ನಿವೇಶನಕ್ಕಾಗಿ ಅರ್ಜಿ ಹಾಕಿರುವ ಮಂದಿಗೆ ಲಾಟರಿ ಮೂಲಕ ನಿವೇಶನ ಹಂಚಿಕೆ, ನಿವೇಶನ ಮಂಜೂರಾತಿ ಪತ್ರ ವಿತರಣೆ, ಅಲ್ಪಸಂಖ್ಯಾತರಿಗೆ ವಿವಿಧ ಯೋಜನೆಗಳ ಅಡಿಯಲ್ಲಿ ಆಟೋ ಹಾಗೂ ಕಾರುಗಳ ವಿತರಣೆ ನಡೆಯಲಿದೆ. ಸೆ.22 ರಂದು ನಗರದ ಬಾಲಕರ ಸರ್ಕಾರಿ ಪದವಿ ಪೂರ್ವ ಕಾಲೇಜು ಆವರಣದಲ್ಲಿ ಬೃಹತ್ ಉಚಿತ ಆರೋಗ್ಯ ಶಿಬಿರ ಹಾಗೂ ಶಸ್ತ್ರಚಿಕಿತ್ಸಾ ಶಿಬಿರ ನಡೆಯಲಿದೆ ಎಂದು ಅವರು ತಿಳಿಸಿದರು.

ಮೂರು ದಿನಗಳ ಕಾರ್ಯಕ್ರಮಗಳಲ್ಲಿ ಸರ್ಕಾರದ ಮಂತ್ರಿಗಳು, ಮಾಜಿ ಸಂಸದ ಡಿ.ಕೆ. ಸುರೇಶ್, ಬೆಂಗಳೂರು ಮೈಸೂರು ಇನ್ ಫ್ರಾಸ್ಟ್ರಕ್ಚರ್ ಕಾರಿಡಾರ್ ಅಧ್ಯಕ್ಷ ರಘುನಂದನ್ ರಾಮಣ್ಣ, ಜಿಲ್ಲೆಯ ಶಾಸಕರು ಭಾಗವಹಿಸುವರು ಎಂದು ಅವರು ತಿಳಿಸಿದರು.

ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಮೋದ್, ನಗರಸಭಾ ಸದಸ್ಯರಾದ ಪ್ರಶಾಂತ್, ವಾಸಿಲ್ ಆಲಿಖಾನ್, ಮುಖಂಡರಾದ ಅಕ್ಕೂರು ಶೇಖರ್, ಮಲುವೇಗೌಡ, ಪಿ.ಡಿ.ರಾಜು, ಕರಣ್ ಆನಂದ್, ಜಯಶೀಲ, ಅಪ್ಪಾಜಿಗೌಡ ಇತರರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT