ಸೋಮವಾರ, ಆಗಸ್ಟ್ 2, 2021
25 °C

ಬಾಲ್ಯ ವಿವಾಹ: ‍ಪೋಷಕರ ವಿರುದ್ಧ ದೂರು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಕನಕಪುರ: ಬಾಲಕಿಗೆ ಬಲವಂತವಾಗಿ ಮದುವೆ ಮಾಡಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಪೋಷಕರ ವಿರುದ್ಧ ಶುಕ್ರವಾರ ದೂರು ದಾಖಲಾಗಿದೆ.

ತಾಲ್ಲೂಕಿನ ಕೋಡಿಹಳ್ಳಿ ಹೋಬಳಿ ಅರಗಡಕಲು ಗ್ರಾಮದಲ್ಲಿ ಏಪ್ರಿಲ್‌ 16ರಂದು ಬಾಲಕಿಗೆ ವಿವಾಹ ನಡೆದಿತ್ತು. ಈ ಸಂಬಂಧ ಮಕ್ಕಳ ಸಹಾಯವಾಣಿಗೆ ದೂರು ಸಲ್ಲಿಕೆ ಆಗಿತ್ತು. 

ದೂರಿನನ್ವಯ ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿ, ಕೋಡಿಹಳ್ಳಿ ಪೊಲೀಸರೊಂದಿಗೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದಾಗ ಬಾಲ್ಯ ವಿವಾಹ ‍ಪತ್ತೆಯಾಗಿದೆ.

 

 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು