ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗನವಾಡಿಯಲ್ಲಿ ಮಕ್ಕಳ ಕಲರವ

Last Updated 9 ನವೆಂಬರ್ 2021, 4:24 IST
ಅಕ್ಷರ ಗಾತ್ರ

ಬಿಡದಿ: ಕೋವಿಡ್‌ನಿಂದಾಗಿ ಒಂದೂವರೆ ವರ್ಷದಿಂದ ಮುಚ್ಚಿದ್ದ ಅಂಗನವಾಡಿ ಕೇಂದ್ರಗಳು ಸೋಮವಾರದಿಂದ ಪ್ರಾರಂಭವಾಗಿವೆ.

ಅಂಗನವಾಡಿಗಳ ಆರಂಭಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಅಗತ್ಯ ಮುಂಜಾಗ್ರತಾ ಕ್ರಮ ತೆಗೆದುಕೊಂಡಿದ್ದು, ಮಕ್ಕಳು ಕೇಂದ್ರಕ್ಕೆ ಹಾಜರಾಗಿದ್ದರು.

ಪಟ್ಟಣದ ವಾರ್ಡ್ 23ರ ಹೆಗ್ಗಡಗೆರೆ ಅಂಗನವಾಡಿಯಲ್ಲಿ ಒಟ್ಟು 28 ಮಕ್ಕಳ ಪೈಕಿ 16 ಮಕ್ಕಳು ಹಾಜರಾಗಿದ್ದರು. ಪೋಷಕರು ತಮ್ಮ ಮಕ್ಕಳನ್ನು ಅಂಗನವಾಡಿ ಕೇಂದ್ರಕ್ಕೆ ಮುಂಜಾಗ್ರತಾ ಕ್ರಮವಹಿಸಿ ಕರೆತಂದಿದ್ದರು.

ಗ್ರಾಮದಲ್ಲಿ ಹಬ್ಬದ ವಾತಾವರಣವಿತ್ತು. ಪೋಷಕರು ಹಾಗೂ ಮಕ್ಕಳ ಉತ್ಸಾಹ ಉತ್ತಮವಾಗಿತ್ತು ಎಂದು ಅಂಗನವಾಡಿ ಕಾರ್ಯಕರ್ತೆ ಸರಸ್ವತಿ ತಿಳಿಸಿದರು.

ಎಲ್ಲಾ ಅಂಗನವಾಡಿ ಕಾರ್ಯಕರ್ತೆಯರು ಕೋವಿಡ್‌ನ ಎರಡು ಲಸಿಕೆ ಪಡೆದಿರಬೇಕು ಎಂದು ಸರ್ಕಾರ ಸುತ್ತೋಲೆ ಹೊರಡಿಸಿದೆ. ಮಕ್ಕಳ ಆರೋಗ್ಯ ಸಂಬಂಧ ಮುಂಜಾಗ್ರತಾ ಕ್ರಮವಹಿಸಲಾಗಿದೆ. ಕೋವಿಡ್‌ ಮಾರ್ಗಸೂಚಿ ಪಾಲಿಸಲಾಗಿದೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT