ಬುಧವಾರ, 28 ಫೆಬ್ರುವರಿ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಕ್ಕಳ ಶೈಕ್ಷಣಿಕ ಸಾಧನೆಗೆ ಪೋಷಕರು ಕೈಜೋಡಿಸಿ; ಸಿ.ಕೆ. ಗೋವಿಂದರಾಜು

ಶೈಕ್ಷಣಿಕ ಸಾಧನೆ
Published 3 ಜನವರಿ 2024, 14:55 IST
Last Updated 3 ಜನವರಿ 2024, 14:55 IST
ಅಕ್ಷರ ಗಾತ್ರ

ಚನ್ನಪಟ್ಟಣ: ಮಕ್ಕಳ ಶೈಕ್ಷಣಿಕ ಸಾಧನೆಗೆ ಉಪನ್ಯಾಸಕರ ಜತೆಗೆ ಪೋಷಕರು ಗಮನ ವಹಿಸಬೇಕು ಎಂದು ಶಾಲಾ ಶಿಕ್ಷಣ ಇಲಾಖೆ (ಪದವಿ ಪೂರ್ವ) ಜಿಲ್ಲಾ ಉಪನಿರ್ದೇಶಕ ಸಿ.ಕೆ.ಗೋವಿಂದರಾಜು ಸಲಹೆ ನೀಡಿದರು.

ನಗರದ ಶತಮಾನೋತ್ಸವ ಭವನದಲ್ಲಿ ಜ್ಞಾನ ಸರೋವರ ಪದವಿ ಪೂರ್ವ ಕಾಲೇಜು ಮತ್ತು ಜ್ಞಾನ ಸರೋವರ ಪ್ರಥಮ ದರ್ಜೆ ಕಾಲೇಜಿನ ವತಿಯಿಂದ ಹಮ್ಮಿಕೊಂಡಿದ್ದ 2023-24ನೇ ಸಾಲಿನ ಪೋಷಕರ ಹಬ್ಬ, ಸಂಸ್ಕೃತಿ ದಿನ ಮತ್ತು ರಾಷ್ಟ್ರಕವಿ ಕುವೆಂಪು ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಶಿಕ್ಷಣವೊಂದೇ ಬದುಕಿನ ಅಂಧಕಾರ ಅಳಿಸುವ ಜ್ಯೋತಿ. ನಿರಂತರ ಅಭ್ಯಾಸ ಕಠಿಣ ಪ್ರರಿಶ್ರಮದಿಂದ ವಿದ್ಯಾರ್ಜನೆ ಮಾಡಿಕೊಂಡು ಸಾಧಕರಾಗಿ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ನಿವೃತ್ತ ನ್ಯಾಯಾಧೀಶ ರುದ್ರಯ್ಯ ಮಾತನಾಡಿ, ವಿದ್ಯಾರ್ಥಿಗಳು ತಮ್ಮ ಅಲೋಚನಾ ಕ್ರಮ ಬದಲಾಯಿಸಿಕೊಂಡು ವೈಚಾರಿಕ ದೃಷ್ಟಿಕೋನ ಮೈಗೂಡಿಸಿಕೊಂಡು ರಾಷ್ಟ್ರದ ಏಳಿಗೆಗೆ ಕಾರಣಕರ್ತರಾಗಿ ಭ್ರಷ್ಟಾಚಾರ ರಹಿತ ಸಮಾಜ ನಿರ್ಮಾಣಕ್ಕೆ ಮುಂದಾಗಬೇಕು ಎಂದರು.

ಪ್ರಾಂಶುಪಾಲ ಬಿ.ವಿ.ಜಯರಾಮೇಗೌಡ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ ಇ.ಒ ಶಿವಕುಮಾರ್, ಪುರ ಪೋಲಿಸ್ ಠಾಣೆ ಸರ್ಕಲ್ ಇನ್ ಸ್ಪೆಕ್ಟರ್ ಶೋಭಾ ವಿ.ಕುಮಾರ್, ಕಸ್ತೂರಿ ಕರ್ನಾಟಕ ಜನಪರ ವೇದಿಕೆ ರಾಜ್ಯ ಘಟಕದ ಅಧ್ಯಕ್ಷ ರಮೇಶ್ ಗೌಡ, ಶಿಕ್ಷಣ ಸಂಯೋಜಕ ಯೋಗೇಶ್ ಚಕ್ಕೆರೆ, ಸಾಹಿತಿ ವಿಜಯ್ ರಾಂಪುರ, ಹಾಸ್ಯ ಕಲಾವಿದ ನಗೆಮಳೆ ಸಿ.ಚಂದ್ರಾಜ್, ಭಾರತ್ ವಿಕಾಸ ಪರಿಷತ್ ದಕ್ಷಿಣ ಪ್ರಾಂತ್ಯದ ರಾಜ್ಯ ಉಪಾಧ್ಯಕ್ಷ ವಸಂತ ಕುಮಾರ್, ವಿದ್ಯಾಸಂಸ್ಥೆ ಅಧ್ಯಕ್ಷ ಎಂ.ಬಿ.ರಾಹುಲ್ ರಾಜೇ ಅರಸ್, ಕಾರ್ಯದರ್ಶಿ ಆರ್.ಆದರ್ಶ ಕುಮಾರ್, ಪ್ರಥಮದರ್ಜೆ ಕಾಲೇಜಿನ ಪ್ರಾಂಶುಪಾಲರಾದ ಬಿ.ಎಸ್ ಹೇಮಲತಾ ಇತರರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT