ಹಾರೋಹಳ್ಳಿ: ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ಪೌರ ಕಾರ್ಮಿಕರು ಹಾರೋಹಳ್ಳಿ ಪಟ್ಟಣ ಪಂಚಾಯಿತಿ ಮುಂಭಾಗ ಪ್ರತಿಭಟನೆ ನಡೆಸಿದರು.

ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿಯಲ್ಲಿ ಕೆಲಸ ಮಾಡುತ್ತಿರುವ ಪೌರ ಕಾರ್ಮಿಕರು ಹಾಗೂ ಪೌರ ನೌಕರರನ್ನು ನಿರ್ಲಕ್ಷಿಸದೆ ಹೊರ ಗುತ್ತಿಗೆ ಪದ್ಧತಿ ನಿಲ್ಲಿಸಿ ಪೌರ ಕಾರ್ಮಿಕರ ಸೇವೆ ಕಾಯಂಗೊಳಿಸಬೇಕು. ನೀರು ಸರಬರಾಜುದಾರರು ಹಾಗೂ ವಾಹನ ಚಾಲಕರು ಜೀವನ ಭದ್ರತೆಯಿಲ್ಲದೆ ಅನೇಕ ವರ್ಷಗಳಿಂದಲೂ ಕೆಲಸ ಮಾಡುತ್ತಿದ್ದಾರೆ. ಅವರನ್ನು ಸರ್ಕಾರಿ ನೌಕರರೆಂದು ಪರಿಗಣಿಸಬೇಕು. ಜೊತೆಗೆ ಪೌರ ಕಾರ್ಮಿಕರಿಗೆ ಪ್ರತಿ ತಿಂಗಳು ವೇತನ ಸಿಗುತ್ತಿಲ್ಲ. ಇದರಿಂದ ಕುಟುಂಬದ ನಿರ್ವಹಣೆ ಕಷ್ಟವಾಗಿದ್ದು ಇದರ ಕಡೆ ಸರ್ಕಾರ ಗಮನಹರಿಸಬೇಕೆಂದು ಒತ್ತಾಯಿಸಿದರು.

ಕೂಡಲೇ ರಾಜಯ ಸರ್ಕಾರ ಶೀಘ್ರ ಸ್ಪಂದಿಸಬೇಕು. ಇಲ್ಲದಿದ್ದರೆ ಪ್ರತಿಭಟನೆ ಮುಂದುವರೆಯುತ್ತದೆ. ನಮ್ಮ ಮುಷ್ಕರದಿಂದ ಪಟ್ಟಣದ ಸ್ವಚ್ಛತೆಗೆ ಧಕ್ಕೆಯುಂಟಾಗುತ್ತದೆ ಎಂದರು.

ಈ ಸಂದರ್ಭದಲ್ಲಿ ಶ್ರೀನಿವಾಸ್, ಶಿವರಾಜು, ನಾಗರಾಜು, ಶ್ರೀನಿವಾಸ್, ಶಿವಾಜಿ, ಕೆಂಪಣ್ಣ, ಮತ್ತು ಪಟ್ಟಣ ಪಂಚಾಯಿತಿಯ ಎಲ್ಲಾ ಸಿಬ್ಬಂದಿ ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.