ರಾಮನಗರ: ‘ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಡಾಕ್ಟರೇಟ್ ಕೊಡಬೇಕು. ಎರಡು ಬಾರಿ ಸಿಎಂ ಆದರೂ ಬುದ್ದಿ ಕಲಿಯದ ಅವರು, ಜನರ ದಿಕ್ಕು ತಪ್ಪಿಸುತ್ತಿದ್ದಾರೆ. ಶೃಂಗೇರಿ ಕ್ಷೇತ್ರದಲ್ಲಿ ಕೋರ್ಟ್ ಆದೇಶದಂತೆ ಮರು ಎಣಿಕೆಯಾಗಿದೆ. ಹೀಗಿರುವಾಗ ಕ್ಷೇತ್ರದಲ್ಲಿ ಮತ ಡಕಾಯಿತಿ ಎಂದು ಬಾಯಿಗೆ ಬಂದಂತೆ ಮಾತನಾಡುವುದು ಸರಿಯಲ್ಲ’ ಎಂದು ಕೇಂದ್ರ ರೈಲ್ವೆ ಸಚಿವ ವಿ. ಸೋಮಣ್ಣ ಆಕ್ರೋಶ ವ್ಯಕ್ತಪಡಿಸಿದರು.

‘ಶೃಂಗೇರಿಯಲ್ಲಿ ಮತ ಡಕಾಯಿತಿ ಆಗಿದೆ’ ಎಂಬ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿಕೆಗೆ ನಗರದಲ್ಲಿ ಮಂಗಳವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿದ ಅವರು, ‘ಇವಿಎಂ ಬದಲು ಬ್ಯಾಲೆಟ್ ಪೇಪರ್ ಬೇಕು ಎನ್ನುವ ಕಾಂಗ್ರೆಸ್ನವರಿಗೆ ದಾವಣಗೆರೆ ಮತ್ತು ಬಾಗಲಕೋಟೆ ಉಪ ಚುನಾವಣೆಯಲ್ಲಿ ಇವಿಎಂ ಬೇಕಾಯ್ತಾ? ಸಿ.ಎಂ.ಗೆ ಸಮಯಕ್ಕೆ ತಕ್ಕಂತೆ ಸುಳ್ಳು ಹೇಳಿ ಅಭ್ಯಾಸ’ ಎಂದು ವ್ಯಂಗ್ಯವಾಡಿದರು.

ಖರ್ಗೆ ವಿರುದ್ಧ ಕಿಡಿ: ‘ಸಚಿವ ಪ್ರಿಯಾಂಕ್ ಖರ್ಗೆ ಅವರು ಕೈಲಾಗದವನು ಮೈ ಪರಚಿಕೊಂಡ ಎಂಬಂತೆ ಮಾತನಾಡುತ್ತಾರೆ. ಕೇರಳದಲ್ಲಿ ಅವರ ಪಕ್ಷ ಗೆದ್ದು ಬೀಗುತ್ತಿದೆಯಲ್ಲಾ, ಅಲ್ಲಿ ಎಲ್ಲವೂ ಸರಿ ಇದೆಯೇ? ಅವರು ಗೆದ್ದಾಗ ಮಾತ್ರ ಸರಿ. ಇಲ್ಲದಿದ್ದರೆ, ನಮ್ಮ ಮೇಲೆ ಗೂಬೆ ಕೂರಿಸುತ್ತಾರೆ’ ಎಂದು ‘ಪಶ್ಚಿಮ ಬಂಗಾಳ ಮತ್ತು ಅಸ್ಸಾಂ ಗೆಲುವು ಚುನಾವಣಾ ಆಯೋಗದ ಗೆಲುವು’ ಎಂಬ ಸಚಿವ ಪ್ರಿಯಾಂಕ್ ಖರ್ಗೆ ಹೇಳಿಕೆಗೆ ಕಿಡಿಕಾರಿದರು.

‘ಡಾ. ಬಿ.ಆರ್. ಅಂಬೇಡ್ಕರ್ ಅವರು ಕಾಂಗ್ರೆಸ್ನವರಿಗೆ ಬೇರೆ ಸಂವಿಧಾನ ಬರೆದು ಕೊಟ್ಟಿದ್ದಾರಾ? ಕಾನೂನು ಎಲ್ಲರಿಗೂ ಒಂದೇ. ಯಾರೂ ಅದನ್ನು ಮೀರುವ ಕೆಲಸ ಮಾಡಲ್ಲ. ಖರ್ಗೆ ಅವರು ಜಾಣ ಕುರುಡರಂತೆ ಮಾತನಾಡಬಾರದು. ಮಹಿಳಾ ಮೀಸಲಾತಿ ತಿರಸ್ಕಾರ ಮಾಡಿದ ಪರಿಣಾಮ ಮಹಿಳೆಯರು ಅವರಿಗೆ ಗೂಸಾ ಕೊಟ್ಟಿದ್ದಾರೆ’ ಎಂದು ಹೇಳಿದರು.

‘ಕಾಂಗ್ರೆಸ್ 2014ರಲ್ಲಿ ಎಷ್ಟು ರಾಜ್ಯದಲ್ಲಿ ಅಧಿಕಾರದಲ್ಲಿತ್ತು? ಈಗ ಎಷ್ಟು ಕಡೆ ಇದೆ? ಪ್ರಧಾನಿ ಮೋದಿ ಅವರ ಅಭಿವೃದ್ಧಿ ಚಿಂತನೆ ದೇಶದ ಜನರ ಗಮನ ಸೆಳೆದಿದೆ. ರಾಜ್ಯ ಸರ್ಕಾರದ ಸಚಿವರು ಅರ್ಥವಿಲ್ಲದ ಮಾತುಗಳನ್ನಾಡುವುದನ್ನು ಬಿಟ್ಟು ಜನರ ಪರವಾಗಿ ಕೆಲಸ ಮಾಡಬೇಕು ಎಂದು ಸಲಹೆ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.