ಸೋಮವಾರ, 7 ಅಕ್ಟೋಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಇಂದು ಮಾಗಡಿಗೆ ಮುಖ್ಯಮಂತ್ರಿ: ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ

Published : 13 ಸೆಪ್ಟೆಂಬರ್ 2024, 0:31 IST
Last Updated : 13 ಸೆಪ್ಟೆಂಬರ್ 2024, 0:31 IST
ಫಾಲೋ ಮಾಡಿ
Comments

ಮಾಗಡಿ: ಇಂದು (ಸೆ. 13, ಶುಕ್ರವಾರ) ಬೆಳಗ್ಗೆ 11.30ಕ್ಕೆ ಹೊಸಪೇಟೆ ಸರ್ಕಲ್‌ನಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಮತ್ತು ಉದ್ಘಾಟನಾ ಸಮಾರಂಭಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸಲಿದ್ದಾರೆ. 

ಮಾಗಡಿ ಶಾಸಕ ಎಚ್.ಸಿ ಬಾಲಕೃಷ್ಣ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ರಾಮನಗರ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಮಾರುಕಟ್ಟೆ (ಅಂಗಡಿ ಮಳಿಗೆಗಳ) ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ.

ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಪಟ್ಟಣದ ವ್ಯಾಪ್ತಿಯಲ್ಲಿ ₹ 20 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿ ಮತ್ತು ಮಾಗಡಿ ಜೂನಿಯರ್ ಕಾಲೇಜು ಆವರಣದಲ್ಲಿ ₹ 7 ಕೋಟಿ ವೆಚ್ಚದಲ್ಲಿ ಆಡಿಟೋರಿಯಂ ನಿರ್ಮಾಣ ಕಾಮಗಾರಿಗೆ ಶಂಕುಸ್ಥಾಪನೆ ನೇರವಿಸಲಿದ್ದಾರೆ. ಸಹಕಾರ ಸಚಿವ ಕೆ.ಎನ್. ರಾಜಣ್ಣ ಬೆಂಗಳೂರು ಹಾಲು ಒಕ್ಕೂಟದ ಮಾಗಡಿ ನೂತನ ಶಿಬಿರ ಕಚೇರಿಯನ್ನು ಉದ್ಘಾಟಿಸುವರು. ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯ ಅಭಿವೃದ್ಧಿ ಸಚಿವ ಡಾ. ಶರಣ ಪ್ರಕಾಶ್ ಪಾಟೀಲ್ ಅವರು ಐ.ಟಿ.ಐ ಕಾಲೇಜು ಉದ್ಘಾಟನೆ ಮಾಡಲಿದ್ದಾರೆ.

ಉನ್ನತ ಶಿಕ್ಷಣ ಇಲಾಖೆ ಸಚಿವರಾದ ಎಂ.ಸಿ. ಸುಧಾಕರ್ ಮಾಗಡಿ ತಾಲ್ಲೂಕಿನ ಹಾರೋಹಳ್ಳಿ ಗ್ರಾಮದಲ್ಲಿ ಪಾಲಿಟೆಕ್ನಿಕ್ ಕಾಲೇಜಿನ ಶಂಕುಸ್ಥಾಪನೆ, ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅತ್ಯಾಧುನಿಕ ಗ್ರಂಥಾಲಯ ಕಟ್ಟಡದ ಶಂಕುಸ್ಥಾಪನೆ, ವಸತಿ, ವಕ್ಫ್ ಹಾಗೂ ಅಲ್ಪಸಂಖ್ಯಾತರ ಕಲ್ಯಾಣ ಸಚಿವ  ಜಮೀರ್ ಅಹ್ಮದ್ ಖಾನ್ ಜೂನಿಯರ್ ಕಾಲೇಜಿನ ಕ್ರೀಡಾಂಗಣ ಅಭಿವೃದ್ಧಿ ಕಾಮಗಾರಿಯ ಭೂಮಿ ಪೂಜೆ ಮತ್ತು ಶಾದಿ ಮಹಲ್ ಉದ್ಘಾಟನೆ ಮಾಡಲಿದ್ದಾರೆ.

ಕಾರ್ಯಕ್ರಮದಲ್ಲಿ ಸಂಸದರಾದ ಡಾ. ಸಿ.ಎನ್. ಮಂಜುನಾಥ್, ಎಸ್.ಟಿ. ಸೋಮಶೇಖರ್, ಇಕ್ಬಾಲ್ ಹುಸೇನ್, ಶ್ರೀನಿವಾಸ್, ವಿಧಾನ ಪರಿಷತ್ ಸದಸ್ಯರಾದ ಸಿ.ಪಿ. ಯೋಗೇಶ್ವರ್, ಎಸ್. ರವಿ, ಪುಟ್ಟಣ್ಣ, ಸುಧಾಮ್‌ದಾಸ್, ರಾಮೋಜಿ ಗೌಡ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಹಾಗೂ ಮಾಜಿ ಸಚಿವರಾದ ಎಚ್.ಎಂ. ರೇವಣ್ಣ, ಕರ್ನಾಟಕ ಹಾಲು ಮಹಾಮಂಡಳಿ ಅಧ್ಯಕ್ಷರಾದ ಭೀಮಾನಾಯ್ಕ, ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಅಧ್ಯಕ್ಷರಾದ ಎಚ್.ಪಿ. ರಾಜಕುಮಾರ್, ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಉಪಾಧ್ಯಕ್ಷರಾದ ಎಂ. ಮಂಜುನಾಥ್ (ಕೆ.ಎಂ.ಎಫ್), ಬೆಂಗಳೂರು ಸಹಕಾರ ಹಾಲು ಒಕ್ಕೂಟದ ಮಾಜಿ ಅಧ್ಯಕ್ಷರಾದ ನರಸಿಂಹಮೂರ್ತಿ, ಕರ್ನಾಟಕ ರಾಜ್ಯ ಸಹಕಾರ ಮಹಾ ಮಂಡಳಿ ನಿಗಮದ ನಿರ್ದೇಶಕರು ಹಾಗೂ ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಎಚ್.ಎನ್. ಅಶೋಕ, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷರಾದ ಕೆ. ರಾಜು, ಬೆಂಗಳೂರು ಹಾಲು ಒಕ್ಕೂಟದ ನಿರ್ದೇಶಕರಾದ ಪಿ. ನಾಗರಾಜ್, ಕೆ. ರಾಜಣ್ಣ (ಕೆ.ಇ.ಬಿ), ರಾಮನಗರ ಜಿಲ್ಲಾ ಸಹಕಾರ ಒಕ್ಕೂಟ ನಿಗಮದ ಅಧ್ಯಕ್ಷರಾದ ಎಂ.ಕೆ. ಧನಂಜಯ  ಭಾಗವಹಿಸಲಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT