ಶನಿವಾರ, 4 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆ.29ರಂದು ರಾಮನಗರ ಜಿಲ್ಲೆಗೆ ಮುಖ್ಯಮಂತ್ರಿ ಭೇಟಿ

ನಾಲ್ಕು ಕಡೆ ಜನಸ್ಪಂದನ ಕಾರ್ಯಕ್ರಮ; ಕುಂದುಕೊರತೆ ಆಲಿಕೆ
Last Updated 27 ಆಗಸ್ಟ್ 2018, 16:19 IST
ಅಕ್ಷರ ಗಾತ್ರ

ರಾಮನಗರ: ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಇದೇ 29ರಂದು ಬುಧವಾರ ಜಿಲ್ಲೆಯ ಪ್ರವಾಸ ಕೈಗೊಂಡಿದ್ದಾರೆ. ರಾಮನಗರ ತಾಲ್ಲೂಕಿನ ಕೈಲಾಂಚ, ಸುಗ್ಗನಹಳ್ಳಿ, ಹಾರೋಹಳ್ಳಿ ಹಾಗೂ ಮರಳವಾಡಿ ಹೋಬಳಿಗಳಲ್ಲಿ ಜನಸಂಪರ್ಕ ಸಭೆ, ಕುಂದುಕೊರತೆ ಆಲಿಕೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಅಂದು ಬೆಳಿಗ್ಗೆ 10 ಗಂಟೆಗೆ ಕೈಲಾಂಚದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಆವರಣ, ಮಧ್ಯಾಹ್ನ 12 ಗಂಟೆಗೆ ಸುಗ್ಗನ ಹಳ್ಳಿ ಸರ್ಕಾರಿ ಪ್ರೌಢಶಾಲೆ ಆವರಣಗಳಲ್ಲಿ ನಡೆಯಲಿರುವ ಜನಸಂಪರ್ಕ ಸಭೆಗಳಲ್ಲಿ ಅವರು ಭಾಗಿಯಾಗಲಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಹಾರೋಹಳ್ಳಿಯ ಗ್ರಾಮಾಂತರ ಪ್ರೌಢಶಾಲೆಯ ಆವರಣ ಹಾಗೂ ಸಂಜೆ 5 ಗಂಟೆಗೆ ಮರಳವಾಡಿ ಎಂ.ಇ.ಎಸ್ ವಿದ್ಯಾಸಂಸ್ಥೆಯ ಆವರಣದಲ್ಲಿ ಸಾರ್ವಜನಿಕರನ್ನು ಭೇಟಿ ಮಾಡಿ, ಕುಂದುಕೊರತೆ ಆಲಿಕೆ ಹಾಗೂ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.

ಪೂರ್ವಭಾವಿ ಸಭೆ: ಮುಖ್ಯಮಂತ್ರಿ ಭೇಟಿ ಹಿನ್ನಲೆಯಲ್ಲಿ ಸೋಮವಾರ ಸಂಜೆ ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸಭೆ ನಡೆಯಿತು.
ಜಿಲ್ಲಾಧಿಕಾರಿ ಕ್ಯಾ. ಕೆ. ರಾಜೇಂದ್ರ ಮಾತನಾಡಿ ‘ಮುಖ್ಯಮಂತ್ರಿಯವರು ಜಿಲ್ಲೆಯಲ್ಲಿ ಹಮ್ಮಿಕೊಂಡಿರುವ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ನೋಡಲ್ ಅಧಿಕಾರಿಗಳನ್ನು ನಿಯೋಜಿಸಲಾಗಿದೆ. ಅವರು ಅಗತ್ಯ ಸಿದ್ಧತೆಯನ್ನು ಮಾಡಿಕೊಳ್ಳಬೇಕು, ಪ್ರತಿ ಹೋಬಳಿ ಕೇಂದ್ರಗಳಲ್ಲಿ ಅರ್ಜಿ ಬರೆಯಲು 10 ಕೌಂಟರ್‌ ಹಾಗೂ ಅಗತ್ಯ ಸಂಪನ್ಮೂಲವನ್ನು ನಿಯೋಜಿಸಬೇಕು ಎಂದು ಸೂಚಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಬಿ. ರಮೇಶ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮುಲ್ಲೈ ಮುಹಿಲನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಆರ್. ಪ್ರಶಾಂತ್ ಹಾಗೂ ಜಿಲ್ಲಾ, ತಾಲ್ಲೂಕು ಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT