ಶನಿವಾರ, ಜುಲೈ 24, 2021
22 °C

ಚನ್ನಪಟ್ಟಣ: ವೈದ್ಯರೊಬ್ಬರಿಗೆ ಕೋವಿಡ್, ಆಸ್ಪತ್ರೆ ಸೀಲ್ ಡೌನ್

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಚನ್ನಪಟ್ಟಣ: ಪಟ್ಟಣದ ಕುವೆಂಪುನಗರ 2ನೇ ಅಡ್ಡರಸ್ತೆ ಖಾಸಗಿ ನರ್ಸಿಂಗ್ ಹೋಂ ವೈದ್ಯರೊಬ್ಬರಿಗೆ ಕೋವಿಡ್‌ –19 ಸೋಂಕು ದೃಢಪಟ್ಟ ಹಿನ್ನೆಲೆಯಲ್ಲಿ ಸೋಮವಾರ ರಸ್ತೆಯನ್ನು ಸೀಲ್ ಡೌನ್ ಮಾಡಲಾಗಿದೆ. 

ಸೋಂಕು ಕಾಣಿಸಿಕೊಂಡ ವೈದ್ಯರನ್ನು ಅದೇ ಆಸ್ಪತ್ರೆಯಲ್ಲಿ ನಿರ್ಮಿಸಿರುವ ಕೊರೊನಾ ವಿಶೇಷ ವಾರ್ಡ್‌ನ ದಾಖಲಿಸಲಾಗಿದೆ. ಇವರು ಹದಿನೈದು ದಿನಗಳ ಹಿಂದೆ ಕೊರೊನಾ ಪಾಸಿಟಿವ್ ಇದ್ದ ಇಬ್ಬರು ವ್ಯಕ್ತಿಗಳಿಗೆ ಚಿಕಿತ್ಸೆ ನೀಡಿದ್ದರು. 

ವೈದ್ಯರು ಸ್ವಯಂ ಕ್ವಾರಂಟೈನ್‌ಗೆ ಒಳಗಾಗಿದ್ದರು. ಹಾಗಾಗಿ ಯಾವುದೇ ರೋಗಿಗಳನ್ನು ಪರೀಕ್ಷೆ ಮಾಡಿರಲಿಲ್ಲ. ಆದರೂ, ರೋಗಿಗಳ ಪಟ್ಟಿ ಸಿದ್ಧಗೊಳಿಸಲಾಗುತ್ತಿದ್ದು ಅವರನ್ನು ಪರೀಕ್ಷೆ ಮಾಡಲಾಗುವುದು ಎಂದು ತಾಲ್ಲೂಕು ಆರೋಗ್ಯಾಧಿಕಾರಿ ಡಾ.ರಾಜು ತಿಳಿಸಿದರು.

ಆಸ್ಪತ್ರೆಯಲ್ಲಿರುವ ಇತರ ವೈದ್ಯರು, ನರ್ಸ್, ಸಿಬ್ಬಂದಿ ಸೇರಿದಂತೆ ಎಲ್ಲರ ಪರೀಕ್ಷೆ ನಡೆಸಲಾಗಿದ್ದು ಅವರಲ್ಲಿ ರೋಗ ಲಕ್ಷಣ ಕಂಡು ಬಂದಿಲ್ಲ. ಮತ್ತೊಮ್ಮೆ ಅವರೆಲ್ಲರ ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ತಿಳಿಸಿದರು.

ಜನರಲ್ಲಿ ಭೀತಿ: ವೈದ್ಯರಿಗೆ ಸೋಂಕು ತಗುಲಿರುವ ವಿಚಾರ ತಾಲ್ಲೂಕಿನಲ್ಲಿ ಹರಡಿ ಜನರು ಭಯಭೀತರಾಗಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು