ಗುರುವಾರ, 2 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮಾಗಡಿ: ಆರ್‌.ಎಲ್‌. ಜಾಲಪ್ಪ ಸ್ಮರಣೆ

Published 19 ಡಿಸೆಂಬರ್ 2023, 5:13 IST
Last Updated 19 ಡಿಸೆಂಬರ್ 2023, 5:13 IST
ಅಕ್ಷರ ಗಾತ್ರ

ಮಾಗಡಿ: ತಾಲ್ಲೂಕಿನ ಸೋಲೂರು ಆರ್ಯ ಈಡಿಗರ ಮಹಾ ಸಂಸ್ಥಾನ ಮಠದ ಆವರಣದಲ್ಲಿನ ಆರ್‌.ಎಲ್‌. ಜಾಲಪ್ಪ ಅಕಾಡೆಮಿಯಲ್ಲಿ ಸೋಮವಾರ ಕೇಂದ್ರ ಸರ್ಕಾರದ ಮಾಜಿ ಸಚಿವ ಆರ್‌.ಎಲ್‌.ಜಾಲಪ್ಪ ಪುಣ್ಯಸ್ಮರಣೆ ಕಾರ್ಯಕ್ರಮ ನಡೆಯಿತು.

ಅಕಾಡೆಮಿ ವ್ಯವಸ್ಥಾಪಕ ಚಿದಾನಂದ್‌ ಅವರು ಆರ್‌.ಎಲ್‌.ಜಾಲಪ್ಪ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು.

ನಂತರ ಮಾತನಾಡಿದ ಅವರು, ಹಿರಿಯ ಮುತ್ಸದ್ದಿ ನಾಯಕ ಆರ್‌.ಎಲ್‌.ಜಾಲಪ್ಪ ಅವರು ಕೇಂದ್ರ ಸರ್ಕಾರದಲ್ಲಿ ಸಚಿವರಾಗಿದ್ದಾಗ ಮೊದಲ ಬಾರಿಗೆ ರೈತರ ಸಂಕಷ್ಟಕ್ಕೆ ನೆರವಾದ ಕರುಣಾಳು. ಸಹಕಾರಿ ಸಂಸ್ಥೆಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರಿಗೆ ಮೀಸಲಾತಿ ಕಲ್ಪಿಸಿದ್ದ ಸಾಮಾಜಿಕ ನ್ಯಾಯದ ಹರಿಕಾರರು. ದೀನದಲಿತರ ಮತ್ತು ಹಿಂದುಳಿದವರ ಮಕ್ಕಳ ಶಿಕ್ಷಣಕ್ಕೆ ಆದ್ಯತೆ ನೀಡಿರುವ ಮಾನವತಾವಾದಿ ಎಂದರು.

ಗ್ರಾಮೀಣ ಒಬಿಸಿ ಮಕ್ಕಳಿಗೆ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಲು ಸೋಲೂರಿನಲ್ಲಿ ಆರ್‌.ಎಲ್‌. ಜಾಲಪ್ಪ ಅಕಾಡೆಮಿ ಆರಂಭಿಸಿ ಸ್ಪರ್ಧಾತ್ಮಕ ಪರೀಕ್ಷೆಗೆ ಅಣಿಗೊಳಿಸಿದ್ದು, ಸಾವಿರಾರು ಒಬಿಸಿ ಯುವಜನತೆ ತರಬೇತಿ ಪಡೆದು ಅಧಿಕಾರಿಗಳಾಗಿದ್ದಾರೆ ಎಂದು ತಿಳಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT