ಅಂಗಡಿ ಮುಂದೆ ಅಡ್ಡಾದಿಡ್ಡಿಯಾಗಿ ನಿಂತಿರುವ ದ್ವಿಚಕ್ರ ವಾಹನ
ದ್ವಿಮುಖ ಸಂಚಾರದಿಂದಾಗಿರುವ ವಾಹನ ದಟ್ಟಣೆ
ನಗರದಲ್ಲಿ ರಸ್ತೆ ಕಾಮಗಾರಿ ನಡೆಯುತ್ತಿರುವುದರಿಂದ ಎಲ್ಲಾ ವಾಹನಗಳು ಒಂದೇ ರಸ್ತೆಯಲ್ಲಿ ಹೋಗಬೇಕಿದೆ. ಅದರಿಂದ ವಾಹನ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಪೊಲೀಸ್ ಇಲಾಖೆಯವರು ಹೆಚ್ಚಿನ ಸಿಬ್ಬಂದಿ ನಿಯೋಜಿಸುವ ಮೂಲಕ ವಾಹನ ದಟ್ಟಣೆ ಸಮಸ್ಯೆ ಬಗೆಹರಿಸಲಾಗುವುದು. ಈ ಬಗ್ಗೆ ಮುಖ್ಯಸ್ಥರೊಂದಿಗೆ ಮಾತನಾಡಿ ಸಮಸ್ಯೆ ಬಗೆಹರಿಸಲಾಗುವುದು.
ಎಂ.ಎಸ್.ಮಹದೇವ್ ನಗರಸಭೆ ಪೌರಾಯುಕ್ತರು ಕನಕಪುರ
ರಸ್ತೆ ಕಾಮಗಾರಿಯಿಂದ ಒಂದೇ ರಸ್ತೆಯಲ್ಲಿ ವಾಹನ ಹಾಗೂ ಸಾರ್ವಜನಿಕರು ಸಂಚರಿಸಬೇಕಿದೆ. ಹಾಗಾಗಿ ಅಂಗಡಿ ಹೋಟೆಲ್‌ಗಳ ಮುಂಭಾಗ ವಾಹನಗಳನ್ನು ನಿಲ್ಲಿಸದೆ ಸುಗಮ ಸಂಚಾರಕ್ಕೆ ಸಾರ್ವಜನಿಕರು ಸಹಕರಿಸಬೇಕು. ಹೆಚ್ಚಿನ ಸಿಬ್ಬಂದಿ ನಿಯೋಜನೆ ಮಾಡಿದ್ದು ವಾಹನ ದಟ್ಟಣೆ ಸಮಸ್ಯೆಯಾಗದಂತೆ ನೋಡಿಕೊಳ್ಳಲಾಗುವುದು.
ಅನಂತ್‌ರಾಮ್ ಸರ್ಕಲ್ ಇನ್‌ಸ್ಪೆಕ್ಟರ್ ನಗರ ವಿಭಾಗ ಕನಕಪುರ
ರಸ್ತೆ ಕಾಮಗಾರಿಯನ್ನು ಬೇಗ ಪೂರ್ಣಗೊಳಿಸಿ. ಲಾರಿ ಸೇರಿದಂತೆ ಬೃಹತ್ ವಾಹನಗಳನ್ನು ಪರ್ಯಾಯ ರಸ್ತೆಯಲ್ಲಿ ಬಿಡಬೇಕು. ಅಂಗಡಿ ಹೋಟೆಲ್‌ಗಳ ಮುಂದೆ ವಾಹನ ನಿಲ್ಲಿಸದಂತೆ ಕ್ರಮವಹಿಸುವ ಮೂಲಕ ಸಂಚಾರ ವ್ಯವಸ್ಥೆ ಸರಿಪಡಿಸಬೇಕು.