₹30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ

ಗುರುವಾರ , ಜೂಲೈ 18, 2019
23 °C
ಉತ್ತಮ ಗುಣಮಟ್ಟದ ಕೆಲಸ ಮಾಡುವಂತೆ ಸೂಚನೆ–ಚೇತನ್‌ ಕುಮಾರ್‌

₹30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆ ಅಭಿವೃದ್ಧಿ

Published:
Updated:
Prajavani

ರಾಮನಗರ: ‘ನನಗೆ ರಾಜಕೀಯವಾಗಿ ಶಕ್ತಿ ತುಂಬಿದ ಒಂದನೇ ವಾರ್ಡಿನ ಅಭಿವೃದ್ಧಿಗೆ ಸಂಸದರ ಸಹಕಾರ ಪಡೆದು ₹30 ಲಕ್ಷ ವೆಚ್ಚದಲ್ಲಿ ಕಾಂಕ್ರೀಟ್ ರಸ್ತೆಯನ್ನು ನಿರ್ಮಿಸಲಾಗುತ್ತಿದೆ’ ಎಂದು ಕಾಂಗ್ರೆಸ್ ಮುಖಂಡ ಎ.ಬಿ. ಚೇತನ್ ಕುಮಾರ್ ಹೇಳಿದರು.

ಇಲ್ಲಿನ ಒಂದನೇ ವಾರ್ಡಿನ ಅರ್ಕಾವತಿ ಬಡಾವಣೆಯಲ್ಲಿ 2018-19ನೇ ಸಾಲಿನಲ್ಲಿ ಕಾಲೊನಿ ಅಭಿವೃದ್ಧಿ ಯೋಜನೆಯ ಅನುದಾನದಡಿ ಸಿ.ಸಿ. ರಸ್ತೆ ಕಾಮಗಾರಿಗೆ ಭಾನುವಾರ ಚಾಲನೆ ನೀಡಿ ಅವರು ಮಾತನಾಡಿದರು.

‘ಬೆಂಗಳೂರು ಮುಖ್ಯರಸ್ತೆಯಿಂದ ಅರ್ಕಾವತಿ ಬಡಾವಣೆ, ತೆಂಗಿನತೋಟ ಬಡಾವಣೆಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯ ಕಾಮಗಾರಿ ಹಲವು ವರ್ಷಗಳಿಂದ ನನೆಗುದಿಗೆ ಬಿದ್ದಿತ್ತು. ಅದನ್ನು ಸಂಸದ ಡಿ.ಕೆ.ಸುರೇಶ್ ಅವರ ಸಹಕಾರ ಪಡೆದು ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಿಂದ ಅನುಷ್ಠಾನ ಮಾಡಿಸಿ, ಈ ಕೆಲಸವನ್ನು ಕೆಆರ್‌ಐಡಿಎಲ್ ವತಿಯಿಂದ ನಿರ್ವಹಿಸಲಾಗುತ್ತಿದೆ. ರಸ್ತೆ ಕೆಲಸವನ್ನು ಉತ್ತಮ ಗುಣಮಟ್ಟದ ಕೆಲಸ ಮಾಡುವಂತೆ ಈಗಾಗಲೇ ಸಂಬಂಧಿಸಿದವರಿಗೆ ಸೂಚಿಸಲಾಗಿದೆ’ ಎಂದರು.

‘ಐದು ವರ್ಷಗಳ ಕಾಲ ಈ ವಾರ್ಡ್‌ ಸದಸ್ಯನಾಗಿದ್ದು ಇಲ್ಲಿನ ಜನತೆಯ ಆಶೀರ್ವಾದದಿಂದ ಆಯ್ಕೆಯಾದ ನಂತರ ಇದ್ದ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸಿದ್ದೇನೆ. 12 ಕೊಳವೆ ಬಾವಿಗಳನ್ನು ಕೊರೆಸಲಾಗಿದೆ. ಒಂದು ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಮತ್ತು ಸಿಸಿ ಚರಂಡಿ ನಿರ್ಮಾಣ, ಶುದ್ಧ ಕುಡಿಯುವ ನೀರಿನ ಘಟಕ ಸ್ಥಾಪನೆ ಮತ್ತು ಸುಸಜ್ಜಿತವಾದ ಉದ್ಯಾನವನ, ಯುಜಿಡಿ, ಬೀದಿದೀಪಗಳ ಅಳವಡಿಕೆ ಮಾಡಲಾಗಿದೆ. ನಗರೋತ್ಥಾನ ಯೋಜನೆಯಡಿ ₹3 ಕೋಟಿ ವೆಚ್ಚದಲ್ಲಿ ವಾಟರ್ ಫಿಲ್ಟರ್ ಬೆಡ್ ನಿರ್ಮಾಣ ಮತ್ತಿತರ ಅಭಿವೃದ್ಧಿ ಕೆಲಸ ಮಾಡುವ ಮೂಲಕ ಇತರ ವಾರ್ಡ್ ಗಳಿಗೆ ಮಾದರಿಯಾಗುವಂತಹ ಕೆಲಸಗಳನ್ನು ಮಾಡಿರುವ ತೃಪ್ತಿ ನನಗಿದೆ’ ಎಂದರು.

ಮುಖಂಡರಾದ ಎಚ್.ಎಸ್. ಲೋಹಿತ್ ಬಾಬು, ಗಂಗಾಧರ್, ರಾಜಣ್ಣ, ಯಶ್ವಂತರಾವ್, ಆನಂದ್, ರಮೇಶ್, ಚಂದ್ರಶೇಖರ್, ಗಂಗಾಧರ್, ಕಾರ್ತಿಕ್ ಇದ್ದರು.

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !