ಶುಕ್ರವಾರ, 14 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಡಿ.ಕೆ.ಸುರೇಶ್ ಗೆಲ್ಲಿಸುವಲ್ಲಿ ನಾವು ಸೋತಿದ್ದೇವೆ: ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ

Published 6 ಜೂನ್ 2024, 5:39 IST
Last Updated 6 ಜೂನ್ 2024, 5:39 IST
ಅಕ್ಷರ ಗಾತ್ರ

ಮಾಗಡಿ: ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಕಳೆದ ವಿಧಾನಸಭಾ ಕ್ಷೇತ್ರ ಚುನಾವಣೆಯಲ್ಲಿ ನಮ್ಮನ್ನು ಗೆಲ್ಲಿಸಿದ್ದಾರೆ. ಆದರೆ, ನಾವು ಅವರನ್ನು ಸೋಲಿಸಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಬೇಸರ ವ್ಯಕ್ತಪಡಿಸಿದರು.

ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಚುನಾವಣೆಯಲ್ಲಿ ನಾವು ಅವರ ಮಟ್ಟಿಗೆ ಶ್ರಮ ಹಾಕಲು ಸಾಧ್ಯವಾಗಿಲ್ಲ ಎಂಬ ನೋವು ಕಾಡುತ್ತಿದೆ. ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಇಳಿದು ಒಬ್ಬ ಸಂಸದರು ಯಾವ ರೀತಿ ಕೆಲಸ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದರು. ಅವರ ಸೋಲು ನಮಗೆ ನೋವು ತಂದಿದೆ ಎಂದರು.

ವಿಜೇತರಾಗಿರುವ ಡಾ.ಸಿ.ಎನ್‌.ಮಂಜುನಾಥ್‌ ಅವರಿಗೆ ಅಭಿನಂದನೆಗಳು. ಅವರು ಮಾಗಡಿ ಕ್ಷೇತ್ರದಲ್ಲಿ ಉಚಿತ ಆರೋಗ್ಯ ಸೌಲಭ್ಯ ನೀಡಲಿ. ಜತೆಗೆ ಹೆಚ್ಚು ಅಭಿವೃದ್ಧಿ ಕಾರ್ಯಗಳು ಮಾಡಲಿ ನಾವು ನೂತನ ಸಂಸದರಿಗೆ ಸಂಪೂರ್ಣ ಸಹಕಾರ ನೀಡುತ್ತೇವೆ ಎಂದು ತಿಳಿಸಿದರು.

ಕಳೆದ ಬಾರಿ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಒಂದು ಸ್ಥಾನ ಬಂದಿತ್ತು, ಈ ಬಾರಿಯ 9 ಸ್ಥಾನ ಗಳಿಸಿದ್ದೇವೆ. ಕೇಂದ್ರ ಸರ್ಕಾರದಲ್ಲಿ ಬದಲಾವಣೆಯಾಗುವುದಿಲ್ಲ. ರಾಜ್ಯ ಸರ್ಕಾರದಲ್ಲಿ ಬದಲಾವಣೆಯಾಗುವ ಪ್ರಶ್ನೆಯೇ ಇಲ್ಲ ಎಂದು ಹೇಳಿದರು.

ಇಲ್ಲಿಯವರೆಗೆ ನೀತಿ ಸಂಹಿತೆ ಕಾರಣ ಯಾವುದೇ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಿಲ್ಲ. ಇನ್ನು ಮುಂದೆ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಲಾಗುವುದು. ಇದಕ್ಕೆ ನೂತನ ಸಂಸದರನ್ನು ಕರೆಯಲಾಗುವುದು ಎಂದು ತಿಳಿಸಿದರು.

ನರಸಿಂಹಮೂರ್ತಿ, ರಂಗಹನುಮಯ್ಯ, ಶಬ್ಬೀರ್, ಬಿ.ಎನ್.ಚಂದ್ರಶೇಖರ್, ಪ್ರವೀಣ್, ಸುಮಾ ರಮೇಶ್, ಪ್ರಸಾದ್ ಸೇರಿದಂತೆ ಇತರರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT