ಶನಿವಾರ, 27 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ನಾಮಪತ್ರದ ಮೂರನೇ ಪ್ರತಿ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್

ಡಿ.ಸಿ ಕಚೇರಿ ಬಳಿ ಸುರೇಶ್ ಗೆ ಹಸ್ತಲಾಘವ ಮಾಡಿದ ಶಾಸಕ ಮುನಿರತ್ನ
Published 4 ಏಪ್ರಿಲ್ 2024, 7:04 IST
Last Updated 4 ಏಪ್ರಿಲ್ 2024, 7:04 IST
ಅಕ್ಷರ ಗಾತ್ರ

ರಾಮನಗರ: ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಡಿ.ಕೆ. ಸುರೇಶ್ ಗುರುವಾರ ತಮ್ಮ ನಾಮಪತ್ರದ ಮೂರನೇ ಪ್ರತಿಯನ್ನು ಚುನಾವಣಾಧಿಕಾರಿ ಡಾ. ಅವಿನಾಶ್ ಮೆನನ್‌ ರಾಜೇಂದ್ರನ್ ಅವರಿಗೆ ಸಲ್ಲಿಸಿದರು.

ಕನ್ನಡ ಶಾಲು ಧರಿಸಿ ಮತ್ತೊಮ್ಮೆ ನಾಮಪತ್ರ ಸಲ್ಲಿಸಿದ ಸುರೇಶ್ ಅವರಿಗೆ ಶಾಸಕ ಎಚ್.ಎ. ಇಕ್ಬಾಲ್ ಹುಸೇನ್, ವಿಧಾನ ಪರಿಷತ್ ಸದಸ್ಯ ಎಸ್. ರವಿ, ಕಾಂಗ್ರೆಸ್ ಜಿಲ್ಲಾ ಘಟಕದ ಅಧ್ಯಕ್ಷ ಗಂಗಾಧರ್ ಇದ್ದರು.

ನಾಮಪತ್ರ ಸಲ್ಲಿಸಲು ಬೆಳಿಗ್ಗೆ 11 ಗಂಟೆಗೆ ಸಮಯ ಕೋರಿದ್ದ ಮಂಜುನಾಥ್ ನಿಗದಿತ ಸಮಯಕ್ಕೆ ಕಚೇರಿಗೆ ಬಂದರು. ಇದಾದ ಐದು ನಿಮಿಷದ ಬಳಿಕ ಸುರೇಶ್ ಸಹ ಬಂದರು. ಆಗ ಚುನಾವಣಾಧಿಕಾರಿ ಮಂಜುನಾಥ್ ಅವರಿಗೆ ಮೊದಲು ನಾಮಪತ್ರ ಸಲ್ಲಿಸಲು ಅವಕಾಶ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಎದುರು ಮೈತ್ರಿಕೂಟದ ಅಭ್ಯರ್ಥಿ ಮತ್ತು ಜೊತೆಗಿದ್ದ ಶಾಸಕರು ಸುರೇಶ್ ಅವರಿಗೆ ಎದುರಾದರು. ಆಗ ಶಾಸಕ ಮುನಿರತ್ನ ಅವರು ಸುರೇಶ್ ಅವರಿಗೆ ಹಸ್ತಲಾಘವ ಮಾಡುವ ಮೂಲಕ ಗಮನ ಸೆಳೆದರು.

ಮಾರ್ಚ್ 28ರಂದು ಸುರೇಶ್ ಅವರು ನಾಮಪತ್ರದ ಎರಡು ಪ್ರತಿ ಮಾತ್ರ ಸಲ್ಲಿಸಿದ್ದರು. ಅಂದು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.‌ ಶಿವಕುಮಾರ್ ಸೇರಿದಂತೆ ಪಕ್ಷದ ಸಚಿವರು ಹಾಗೂ ಪಕ್ಷದ ಶಾಸಕರು ಭಾಗವಹಿಸಿದ್ದ ನಾಮಪತ್ರ ಸಲ್ಲಿಕೆಯ ಮೆರವಣಿಗೆ ಮತ್ತು ಬಹಿರಂಗ ಸಭೆಯು ಕಾಂಗ್ರೆಸ್ ಶಕ್ತಿ ಪ್ರದರ್ಶನಕ್ಕೆ ಸಾಕ್ಷಿಯಾಗಿತ್ತು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT